ಮೆಟ್ರೋ ದರ ಹೆಚ್ಚಳ:ಕಾಂಗ್ರೆಸ್, ಬಿಜೆಪಿಯ ನಡುವೆ ವಾಕ್ಸಮರ
- by Suddi Team
- February 6, 2026
- 23 Views
ಬೆಂಗಳೂರು: ಫೆಬ್ರವರಿ 9, 2026 ರಿಂದ ಜಾರಿಗೆ ಬರಲಿರುವ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆಯನ್ನು (ಶೇ. 5ರಷ್ಟು ಹೆಚ್ಚಳ) ಬಿಜೆಪಿ ತೀವ್ರವಾಗಿ ವಿರೋಧಿಸಿದೆ. ಮೆಟ್ರೋ ದರ ಹೆಚ್ಚಳವು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವೆ ತೀವ್ರ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಈ ದರ ಹೆಚ್ಚಳವು ಸಾಮಾನ್ಯ ಜನರ ಮೇಲೆ ಹೊರೆಯಾಗಲಿದೆ ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಹೊಸದಾಗಿ ‘ದರ ನಿಗದಿ ಸಮಿತಿ’ (FFC) ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪ್ರಸ್ತುತ ಇರುವ ದರ ಪದ್ಧತಿಯಲ್ಲಿ ಲೋಪದೋಷಗಳಿದ್ದು, ದರಗಳನ್ನು ತರ್ಕಬದ್ಧಗೊಳಿಸುವವರೆಗೆ ಹೆಚ್ಚಳವನ್ನು ತಡೆಹಿಡಿಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ದರ ಏರಿಕೆಯಿಂದಾಗಿ ಜನರು ಖಾಸಗಿ ವಾಹನಗಳನ್ನು ಅವಲಂಬಿಸುವಂತಾಗುತ್ತದೆ, ಇದು ನಗರದ ಸಂಚಾರ ದಟ್ಟಣೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು, ರಾಜ್ಯ ಸರ್ಕಾರವು ಮೆಟ್ರೋಗೆ ನೀಡುತ್ತಿದ್ದ ಹಣಕಾಸಿನ ನೆರವನ್ನು ಸ್ಥಗಿತಗೊಳಿಸಿರುವುದರಿಂದಲೇ ಈ ಪರಿಸ್ಥಿತಿ ಬಂದಿದೆ ಎಂದು ಆರೋಪಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ದರ ಏರಿಕೆಯ ನಿರ್ಧಾರವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ, ಇದು ಕೇಂದ್ರ ಸರ್ಕಾರದ ನೇತೃತ್ವದ ಸಮಿತಿಯ ನಿರ್ಧಾರವಾಗಿದೆ ಎಂದು ಕೇಂದ್ರ ಸರ್ಕಾರದ ಕಡೆ ಬೆರಳು ಮಾಡಿದ್ದಾರೆ.
Related Articles
Thank you for your comment. It is awaiting moderation.


Comments (0)