ಜೈಲಿನಿಂದಲೇ ಅಭಿಮಾನಿಗಳಿಗೆ ಸಂದೇಶ ನೀಡಿದ ನಟ ದರ್ಶನ್
- by Suddi Team
- August 17, 2025
- 113 Views

ಬೆಂಗಳೂರು: ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು…ಇದು ನಟ ದರ್ಶನ್ ತನ್ನ ಅಭಿಮಾನಿಗಳಿಗೆ ಕಳುಹಿಸಿರುವ ಸಂದೇಶವಾಗಿದೆ.
ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದರಿಂದಾಗಿ ಮತ್ತೆ ಜೈಲು ಸೇರಿರುವ ನಟ ದರ್ಶನ್, ಬಂಧಿಖಾನೆಯಿಂದಲೇ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. ತಮ್ಮ ಪತ್ನಿ ವಿಜಯಲಕ್ಷ್ಮಿ ಅವರ ಮೂಲಕ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.
ಪತ್ರದಲ್ಲೇನಿದೆ?;
ಎಲ್ಲರಿಗು ನಮಸ್ಕಾರ.
ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ.
ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ, ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ.
“ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.
ನಿಮ್ಮ ಪ್ರೀತಿಯ
ದಾಸ
Related Articles
Thank you for your comment. It is awaiting moderation.
Comments (0)