ಕಾನೂನಿನ ಮುಂದೆ ಎಲ್ಲರೂ ಸಮಾನರು;ದಚ್ಚು ಬೇಲ್ ಕ್ಯಾನ್ಸಲ್ ಗೆ ಸ್ಯಾಂಡಲ್ ವುಡ್ ಪದ್ಮಾವತಿ ರಿಯಾಕ್ಷನ್

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸಿದೆ.ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಟಿ ರಮ್ಯಾ ಇನ್ಸ್ಟಾಗ್ರಾಂ ನಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದಾರೆ.

ತೀರ್ಪು ಬರುತ್ತಿದ್ದಂತೆ ಸೋಷಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯೆ ನೀಡಿರುವ ರಮ್ಯಾ, ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ. ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ – ಇದು ದೀರ್ಘ ಮತ್ತು ಕಠಿಣ ಆದರೆ ಸುರಂಗದ ಕೊನೆಯಲ್ಲಿ ಬೆಳಕು ಇರುವಂತೆ ಇರುತ್ತದೆ ಹಾಗಾಗಿ ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯವನ್ನು ಸಿಗಲಿದೆ,ಮುಖ್ಯವಾಗಿ, ನಿಮ್ಮ ಆತ್ಮಸಾಕ್ಷಿಗೆ ನಿಷ್ಠರಾಗಿರಿ ಎಂದು ಪೋಸ್ಟ್ ಮಾಡಿದ್ದಾರೆ.

Related Articles

Comments (0)

Leave a Comment