ಡಾ. ರಾಜ್ಕುಮಾರ್ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಚ್ಚಾ ಬಾಂಬ್ ದಾಳಿ ಶಂಕೆ
- by Suddi Loka
- November 10, 2026
- 142 Views
ಗಾಜನೂರು: ವರನಟ ಡಾ. ರಾಜ್ಕುಮಾರ್ ಅವರ ಸಂಬಂಧಿಕರ ಮನೆಯಲ್ಲಿ ತಮಿಳುನಾಡಿನ ಗಾಜನೂರಿನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಮನೆಯ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಡಾ. ರಾಜ್ಕುಮಾರ್ ಅವರ ಸಂಬಂಧಿಯೊಬ್ಬರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ತಾಳವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇದು ಉದ್ದೇಶಪೂರ್ವಕ ದಾಳಿಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Comments (0)