ಗುಜರಾತ್ನಲ್ಲಿ ಭೀಕರ ರಸ್ತೆ ಅಪಘಾತ: ಮೂರು ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ 7 ಮಂದಿ ಸಾವು
- by Suddi Loka
- November 22, 2026
- 11 Views
ಭುಜ್: ಗುಜರಾತ್ನ ಕಛ್ ಜಿಲ್ಲೆಯ ಭುಜ್-ಖಾವ್ಡಾ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಕಾರು ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಹಸುಗೂಸು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.
ರಾತ್ರಿ ಸುಮಾರು 9.30ರ ವೇಳೆಗೆ ಎದುರಿನಿಂದ ಬರುತ್ತಿದ್ದ ಸರಕು ಸಾಗಣೆ ಟ್ರಕ್ಗೆ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಎರಡು ತುಂಡಾಗಿದೆ. ಉತ್ತರಾಖಂಡದಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಮೃತರನ್ನು ಸೌರವ್ಸಿಂಗ್ ನೇಗಿ (32), ಅವರ ಪತ್ನಿ ಸವಿತಾ, ಪುತ್ರಿ ಶಿವಿಕಾ, ರಿಂಕಿ ನಿತಿನ್ ಗುನ್ಸಾಯಿ, ಪುತ್ರಿ ವಾಮಿಕಾ, ರಾಜೇಶ್ ಸಿಂಗ್ ರಾವತ್ ಮತ್ತು ಏಳು ವರ್ಷದ ರಕ್ಷಿತಾ ಎಂದು ಗುರುತಿಸಲಾಗಿದೆ. ಮೃತ ಮಕ್ಕಳಲ್ಲಿ ಮೂರು ತಿಂಗಳ ಹಸುಗೂಸು ಶಿವಿಕಾ ಕೂಡ ಸೇರಿದ್ದಾಳೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ನೆರವಾಗಿದ್ದು, ಅಧಿಕಾರಿಗಳು ಹಲವು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಿದ್ದಾರೆ. ಮೃತದೇಹಗಳನ್ನು ಭುಜ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತರು ಸೇನಾ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ವಿಷಯ ತಿಳಿದ ಭಾರತೀಯ ಸೇನೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.ಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತರು ಸೇನಾ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ವಿಷಯ ತಿಳಿದ ಕೂಡಲೇ ಭಾರತೀಯ ಸೇನೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ.


Comments (0)