ಪ್ರವಾಹ ಪೀಡಿತ ರಾಜ್ಯಕ್ಕೆ ಕೂಡಲೇ ಅನುದಾನ ಬಿಡುಗಡೆಗೆ ಸಿಎಂ ಮನವಿ!
- by Suddi Team
- August 16, 2019
- 65 Views
ನವದೆಹಲಿ: ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪ್ರವಾಹದಿಂದ ತತ್ತರಿಸಿರುವ ರಾಜ್ಯಕ್ಕೆ ಪರಿಹಾರ ಕಾರ್ಯಗಳಿಗಾಗಿ ಕೂಡಲೇ ಅನುದಾನ ಬಿಡುಗಡೆಗೆ ಮಾಡುವಂತೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಪ್ರಧಾನಿಯವರು ಕೂಡಲೇ ನಷ್ಟದ ಅಂದಾಜು ಮಾಡಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಗಂಭೀರತೆಯ ಕುರಿತು 45 ನಿಮಿಷಗಳ ಕಾಲ ಚರ್ಚಿಸಿ, ಪ್ರಧಾನಿಯವರಿಗೆ ಮನವರಿಕೆ ಮಾಡಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಪುನರ್ ನಿರ್ಮಾಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಉಪಸ್ಥಿತರಿದ್ದರು.
Related Articles
Thank you for your comment. It is awaiting moderation.


Comments (0)