ತಿರುಪ್ಪರಂಕುಂದ್ರಂ ದೀಪಂ ವಿವಾದ: ಮುರುಗನ್ ದೇವರಿಗೆ ಪ್ರಧಾನಿ ಮೋದಿ ಪ್ರಾರ್ಥನೆ! 2,116 ದೇವಸ್ಥಾನಗಳಲ್ಲಿ ದೀಪ ಬೆಳಗಿಸಲು ಬಿಜೆಪಿ ಅಭಿಯಾನ
- by Suddi Loka
- November 28, 2026
- 6 Views
ಚೆನ್ನೈ: ತಮಿಳುನಾಡಿನ ತಿರುಪ್ಪರಂಕುಂದ್ರಂ ದೀಪಂ ವಿವಾದದ ನಡುವೆ ಪ್ರಧಾನಿ ನರೇಂದ್ರ ಮೋದಿ ಮುರುಗನ್ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಶುಕ್ರವಾರ ರಾತ್ರಿ ಎಕ್ಸ್ನಲ್ಲಿ ಭಕ್ತಿಗೀತೆ ಹಂಚಿಕೊಂಡ ಅವರು, “ವೆಟ್ರಿವೇಲ್ ಮುರುಗನಕ್ಕು ಅರೋಹರಾ” ಎಂದು ತಮಿಳು, ಇಂಗ್ಲಿಷ್ ಮತ್ತು ಹಿಂದಿ ಲಿಪಿಗಳಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ತಿರುಪ್ಪರಂಕುಂದ್ರಂ ಬೆಟ್ಟದ ದೀಪಸ್ತಂಭದಲ್ಲಿ ದೀಪ ಬೆಳಗಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಮಿಳುನಾಡಿನ ಮುಖ್ಯ ಕಾರ್ಯದರ್ಶಿ, ಡಿಜಿಪಿ ಸೇರಿದಂತೆ 15 ಅಧಿಕಾರಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಸುಬ್ರಮಣ್ಯಸ್ವಾಮಿ ದೇವಸ್ಥಾನದ ಟ್ರಸ್ಟಿಗಳ ಮಂಡಳಿಯನ್ನು ಅಮಾನತುಗೊಳಿಸಿ, ತಾತ್ಕಾಲಿಕ ಆಡಳಿತವನ್ನು ಇಬ್ಬರು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವಹಿಸಿದೆ.
ಇನ್ನೊಂದೆಡೆ, ಬಿಜೆಪಿ ಉಪಾಧ್ಯಕ್ಷ ಕೆ.ಪಿ. ರಾಮಲಿಂಗಂ ವಿಜಯ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ 2,116 ದೇವಸ್ಥಾನಗಳಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುರುಗನ್ ಭಕ್ತರಿಂದ ದೀಪ ಬೆಳಗಿಸುವ ‘ಅರಂ ಕಾಕ್ಕುಂ ಅಲಯ ದೀಪಂ’ ಅಭಿಯಾನ ಘೋಷಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಪಾಲಿಸದ ಅಧಿಕಾರಿಯನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ.


Comments (0)