ನಟ ಚಿರಂಜೀವಿ ಸರ್ಜಾ ಇನ್ನಿಲ್ಲ!
- by Suddi Team
- June 7, 2020
- 124 Views
ಬೆಂಗಳೂರು: ನಟ ಚಿರಂಜೀವಿ ಸರ್ಜಾ(39) ಹೃದಾಯಘಾತದಿಂದ ಕೊನೆಯುಸಿರೆಳೆದಿದ್ದು, ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ಲಘು ಹೃದಯಾಘಾತದಿಂದ ನಟ ಚಿರಂಜೀವಿ ಸರ್ಜಾ ಅವರನ್ನು ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ತೊಂದರೆ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೆ ಚಿರಂಜೀವಿ ಸರ್ಜಾ ಇಹ ಲೋಕ ತ್ಯಜಿಸಿದ್ದಾರೆ.
ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಚಿರಂಜೀವಿ ಸರ್ಜಾ ದಂಡಂ ದಶಗುಣಂ, ವರದ ನಾಯಕ, ಸಿಂಗ, ಚಿರು, ಅಮ್ಮ ಐ ಲವ್ ಯು ಸೇರಿ 22 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಮೇ2, 2018 ರಂದು ನಟಿ ಮೇಘನ ರಾಜ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಚಿರಂಜೀವಿ ಸರ್ಜಾ, ಬಹು ಭಾಷಾ ನಟ ಅರ್ಜುನ್ ಸರ್ಜಾ ಸೋದರಳಿಯ.
Related Articles
Thank you for your comment. It is awaiting moderation.


Comments (0)