ಬಿಬಿಎಂಪಿ ಬೈ ಎಲೆಕ್ಷನ್: ಕೈ ಕಾರ್ಯಕರ್ತನ ಮೇಲೆ ಹಲ್ಲೆ
- by Suddi Team
- June 18, 2018
- 112 Views
ಬೆಂಗಳೂರು: ಬಿನ್ನಿಪೇಟೆ ವಾರ್ಡ್ ಉಪ ಚುನಾವಣೆ ಸಂಬಂಧ ಜೆಡಿಎಸ್ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಕಳೆದ ರಾತ್ರಿ ಸುಮಾರು 12 .15ರ ಸುಮಾರಿಗೆ ಮಾಗಡಿ ರಸ್ತೆಯ ಬಿನ್ನಿಪೇಟೆಯ ವಾರ್ಡ್ 121 ರಲ್ಲಿ ಘಟನೆ ನಡೆದಿದ್ದು, 10 ಜನ ಜೆಡಿಎಸ್ ಕಾರ್ಯಕರ್ತರ ತಂಡ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಕುಮಾರ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.
ಗಾಯಾಳು ಸುರೇಶ್ ಕುಮಾರ್ ಮಾಗಡಿ ರಸ್ತೆಯ ಮಧು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
Thank you for your comment. It is awaiting moderation.


Comments (0)