ಅತ್ಯಾಚಾರ ಪ್ರಕರಣದ ವಿಚಾರಣೆಯಲ್ಲಿ ವಿಳಂಬ; ಜಾಮೀನಿಗೆ ಮನವಿ ಮಾಡಿದ ಪ್ರಜ್ವಲ್
- by Suddi Team
- June 24, 2025
- 176 Views

ಬೆಂಗಳೂರು: ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ದಾಖಲಾಗಿರುವ ದೂರಿನ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಕೆಯಾದ ನಂತರ ಪ್ರಕರಣದ ವಿಚಾರಣೆಯಲ್ಲಿ ಒಂದಿಚೂ ಪ್ರಗತಿ ಕಾಣದ ಅಂಶ ಪರಿಗಣಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನೀಡಬೇಕು ಎಂದು ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಹೈಕೋರ್ಟ್ಗೆ ಮನವಿ ಮಾಡಿದರು.
ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಪ್ರಜ್ವಲ್ ಪರ ವಕೀಲ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ವಿಚಾರಣೆಯಲ್ಲಿ ಇಲ್ಲಿಯವರೆಗೆ ಒಂದಿಂಚೂ ಪ್ರಗತಿ ಕಂಡಿಲ್ಲ. 150ಕ್ಕೂ ಅಧಿಕ ಸಾಕ್ಷಿಗಳಿದ್ದು, ಸದ್ಯಕ್ಕಂತೂ ವಿಚಾರಣೆ ಪೂರ್ಣಗೊಳ್ಳುವ ಸಾಧ್ಯತೆ ಇಲ್ಲ. ವಿಚಾರಣೆ ತಡವಾಗುವುದು ಜಾಮೀನಿಗೆ ಆಧಾರವಾಗುತ್ತದೆ ಎಂದು ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ಸ್ಪಷ್ಟಪಡಿಸಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಈ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್, ವಿಚಾರಣೆ ಯಾರಿಂದ ವಿಳಂಬವಾಗುತ್ತಿದೆ? ಅರ್ಜಿದಾರರ ನಡತೆ ಏನೆಂಬುದನ್ನು ನ್ಯಾಯಾಲಯಕ್ಕೆ ತಿಳಿಸಿಕೊಡಲಾಗುವುದು. ಸಾಕ್ಷ್ಯ ವಿಚಾರಣೆ ವಿಳಂಬಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿತು.
ಸಂಪೂರ್ಣ ಸುದ್ದಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ..
Related Articles
Thank you for your comment. It is awaiting moderation.
Comments (0)