ಕೊಡಗಿನಲ್ಲಿ ಭೂಕಂಪವಾಗುತ್ತದೆ ಎಂಬುದು ಕೇವಲ ವಂದತಿ: ಸಿಎಂ
- by Suddi Team
- August 18, 2018
- 127 Views
ಮಡಿಕೇರಿ: ಮಹಾ ಮಳೆಯಿಂದ ತತ್ತರಿಸಿರುವ ಕೊಡಗಿನ ಜನತೆಗೆ ಇದೀಗ ಜಿಲ್ಲೆಯಲ್ಲಿ ಭೂಕಂಪ ಸಂಭವಿಸುತ್ತದೆ ಎನ್ನುವ ಸುಳ್ಳು ಸುದ್ದಿ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕೊಡಗಿನಲ್ಲಿ ಭೂಕಂಪನವಾಗುವ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಸಂಕಷ್ಟದಲ್ಲಿ ಸಿಲುಕಿರುವ ಕೊಡಗಿನ ಜನತೆಯ ಕಿವಿಗೆ ಬಿದ್ದು ಮತ್ತಷ್ಟು ಚಿಂತೆಗೆ ಈಡು ಮಾಡಿದ್ದು, ಭಯದಲ್ಲೇ ಕಾಲ ಕಳೆಯುವಂತೆ ಮಾಡುತ್ತಿದೆ.
ಈ ಕುರಿತಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
Related Articles
Thank you for your comment. It is awaiting moderation.



Comments (0)