ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಪೋಸ್ಟ್;ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ

ಬೆಂಗಳೂರು: ವಿಜಯಲಕ್ಷ್ಮೀ ದರ್ಶನರವರ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾನಸಿಕ ಹಿಂಸೆ ನೀಡುತ್ತಿರುವುದರ ಕುರಿತಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದಾರೆ.

ಸಾಮಾಜಿಕ ಹೋರಾಟಗಾರ ಬಿ. ಆರ್ ಭಾಸ್ಕರ್ ಪ್ರಸಾದ್ ಮಹಿಳಾ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು,ಅರ್ಜಿಯಲ್ಲಿ ನಟ ದರ್ಶನ್ ರವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಹಾಗೂ ಇವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದಲ್ಲದೇ, ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣಿನ ಸ್ವಾಭಿಮಾನ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ಹಾಗೂ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಅರ್ಜಿದಾರರ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ 15 ದಿನಗಳೊಳಾಗಿ ಸಲ್ಲಿಸುವಂತೆ ಕೋರಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

Related Articles

Comments (0)

Leave a Comment