ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಹಂತಹಂತವಾಗಿ ಸ್ಥಾಪನೆ: ಸಿಎಂ

ವಿಜಯಪುರ: ರಾಜ್ಯದ ಪ್ರತಿ ಜಿಲ್ಲೆಯೂ ಸರ್ಕಾರಿ ವೈದ್ಯಕೀಯ ಕಾಲೇಜು ಹೊಂದಬೇಕು ಎನ್ನುವುದು ನಮ್ಮ ಸರ್ಕಾರದ ಆಶಯವಾಗಿದ್ದು,ಯಾವ ಜಿಲ್ಲೆಯನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಜಯಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಚಿಂತನೆ ಇದೆ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆಯಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

 

Related Articles

Comments (0)

Leave a Comment