ಭಾರಿ ಮಳೆ ಮುನ್ಸೂಚನೆ:ಕೊಡಗು,ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
- by Suddi Team
- June 12, 2025
- 88 Views
ಮಡಿಕೇರಿ:ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಭಾರಿ ಮಳೆಯಾಗುತ್ತಿದೆ. ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ದಿನದ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮತ್ತೆ ಮಳೆಯ ಅನ್ಬರ ಹೆಚ್ಚಾಗಿದೆ. ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆಯ ಸಾಧ್ಯತೆಯ ಮುನ್ಸೂಚನೆಯಾಗಿ ರೆಡ್ ಅಲರ್ಟ್ ಕಾರಣದಿಂದ ಎರಡು ಜಿಲ್ಲೆಗಳ ಶಾಲಾ ಕಾಲೇಜಿಗೆ ಒಂದು ದಿನ ರಜೆ ಘೋಷಿಸಲಾಗಿದೆ. ಕೊಡುಗು ಹಾಗೂ ಉಡುಪಿ ಜಿಲ್ಲೆಯಲ್ಲಿ ಇಂದು ಒಂದು ದಿನ ರಜೆ ಘೋಷಿಸಲಾಗಿದೆ. ಉಡುಪಿ ಹಾಗೂ ಕೊಡಗು ಜಿಲ್ಲಾಧಿಕಾರಿಗಳು ಮಳೆ ಅನಾಹುತ ಸಾಧ್ಯತೆಯ ಮುನ್ನಚ್ಚೆರಿಕಾ ಕ್ರಮವಾಗಿ ರಜೆ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ಒಂದು ದಿನ ರಜೆ ನೀಡಲಾಗಿದೆ.
ಮಂಗಳೂರಿನಲ್ಲಿಯೂ ಮಳೆ ಸಾಧ್ಯತೆ ಇದ್ದರೂ ಸಧ್ಯಕ್ಕೆ ರಜೆ ಘೋಷಣೆ ಮಾಡಿಲ್ಲ, ಪರಿಸ್ಥಿತಿ ನೋಡಿಕೊಂಡು,ಮಂಗಳೂರು ಸೇರಿದಂತೆ ಇತರ ಕಡೆ ರಜೆಯ ನಿರ್ಧಾರ ಪ್ರಕಟಿಸಲಾಗುತ್ತದೆ.
Related Articles
Thank you for your comment. It is awaiting moderation.


Comments (0)