ಎಂಬಿಎ ಎಂಸಿಎ ಪ್ರವೇಶಕ್ಕೆ ಇಂದು ಪರೀಕ್ಷೆ

ಬೆಂಗಳೂರು:ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ  ಇಂದು ರಾಜ್ಯದ 11 ಜಿಲ್ಲೆಗಳಲ್ಲಿ ಲಿಖಿತ ಪರೀಕ್ಷೆ (ಪಿಜಿಸಿಇಟಿ) ನಡೆಯಲಿದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ಬೆಂಗಳೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲ್ಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ನಗರಗಳ ಒಟ್ಟು 68 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಬೆಳಿಗ್ಗೆ ಎಂಸಿಎ ಹಾಗೂ ಮಧ್ಯಾಹ್ನ ಎಂಬಿಎ ಪ್ರವೇಶಕ್ಕೆ ಪರೀಕ್ಷೆ ನಡೆಯಲಿದೆ. ಎಂಸಿಎ ಪ್ರವೇಶಕ್ಕೆ18,738 ಹಾಗೂ ಎಂಬಿಎ ಪ್ರವೇಶಕ್ಮೆ 33,282 ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವಸ್ತ್ರ ಸಂಹಿತೆ ಇಂದಿನ ಪರೀಕ್ಷೆಗೂ ಅನ್ವಯ ಆಗಲಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ಯಾಮರಾ ಕಣ್ಗಾವಲು ಕೂಡ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

Related Articles

Comments (0)

Leave a Comment