ಫುಕೆಟ್ನಲ್ಲಿ ಭೀಕರ ಅಗ್ನಿ ಅವಘಡ: 11 ಮಂದಿ ಸಾವು, 16 ಜನರಿಗೆ ಗಾಯ
- by Suddi Loka
- November 16, 2026
- 416 Views
ಬ್ಯಾಂಕಾಕ್: ಥಾಯ್ಲೆಂಡ್ನ ಜನಪ್ರಿಯ ಪ್ರವಾಸಿ ತಾಣ ಫುಕೆಟ್ನ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, 16 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಹನ ಬಾಡಿಗೆ ವ್ಯವಹಾರ ನಡೆಸುತ್ತಿದ್ದ ಕಟ್ಟಡದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅಕ್ಕಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದೆ. ನಸುಕಿನ ಜಾವ 3.17ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಗಾಯಗೊಂಡವರಲ್ಲಿ 15 ಮಂದಿ ಥಾಯ್ಲೆಂಡ್ ಪ್ರಜೆಗಳಾಗಿದ್ದು, ಒಬ್ಬರು ಮ್ಯಾನ್ಮಾರ್ ಮೂಲದವರಾಗಿದ್ದಾರೆ. ಘಟನೆಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಪೈಕಿ ಯಾವುದೇ ಪ್ರವಾಸಿಗರು ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಫುಕೆಟ್ನ ಪಶ್ಚಿಮ ಕರಾವಳಿಯ ಜನಪ್ರಿಯ ಪಟಾಂಗ್ ಕಡಲತೀರದ ಸಮೀಪ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಇದಕ್ಕೂ ನಾಲ್ಕು ತಿಂಗಳ ಹಿಂದೆ ಬ್ಯಾಂಕಾಕ್ನ ಬಾರ್ವೊಂದರಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದರು.


Comments (0)