ಜಿಬಿಎ ಸೇರಿ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರಿಕೆ;ಹೆಚ್.ಡಿ ದೇವೇಗೌಡ

ಬೆಂಗಳೂರು:ಜಿಬಿಎ ಸೇರಿದಂತೆ ಮುಂಬರಲಿರುವ ಎಲ್ಲ ಚುನಾವಣೆಗಳಲ್ಲಿಯೂ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿದೆ,ಮೈತ್ರಿ ಅಬಾಧಿತ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಮುಂಬರುವ ಜಿಬಿಎ ಚುನಾವಣೆಯಲ್ಲಿ ಕನಿಷ್ಠ 50-60 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಜೆಡಿಎಸ್​​​ ಹೊಂದಿದೆ. ಹೀಗಾಗಿ ನಗರದಲ್ಲಿ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಅವರು ತಿಳಿಸಿದರು.

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿ ಮಾತನಾಡಿದ ಅವರು,ಲೋಕಸಭೆ ಚುನಾವಣೆಗೆ ಜೆಡಿಎಸ್‌ – ಬಿಜೆಪಿ ಮೈತ್ರಿ ಮಾಡಿಕೊಂಡವು. ಈ ಮೈತ್ರಿ ಮುಂದಿನ ಚುನಾವಣೆಗಳಿಗೂ ಅಬಾಧಿತವಾಗಿ ಮುಂದುವರಿಯುತ್ತದೆ. ಯಾವುದೇ ಚುನಾವಣೆಯಾದರೂ ಮೈತ್ರಿಗೆ ಧಕ್ಕೆ ಇಲ್ಲ. ಈ ಬಗ್ಗೆ ಯಾರೂ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭೆ ಚುನಾವಣೆಗಳಿಗೂ ಮುಂದುವರಿಯುತ್ತದೆ ಎಂದು ದೇವೇಗೌಡರು ಒತ್ತಿ ಹೇಳಿದರು.

“ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ನನ್ನ ಸಂಬಂಧ ಎಂದಿಗೂ ಬದಲಾಗುವುದಿಲ್ಲ. ನಮ್ಮ ಬಾಂಧವ್ಯ ಉತ್ತಮವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ನಾನು ಅವರ ಬಗ್ಗೆ ಲಘುವಾಗಿ ಮಾತನಾಡಿದ ಒಂದು ಸಂದರ್ಭವನ್ನು ತೋರಿಸಿ’ ಎಂದು ಹೇಳಿದರು.

ಬಿಡದಿ ಟೌನ್ ಶಿಪ್ ಬಗ್ಗೆ ಎಲ್ಲಾ ಗೊತ್ತಿದೆ:

ಈ ಯೋಜನೆ ಬಗ್ಗೆ ನನಗೆ ಎಲ್ಲಾ ಮಾಹಿತಿಯೂ ಇದೆ. ಭೂಸ್ವಾಧೀನಕ್ಕೆ  ರೈತರು ವಿರೋಧ ಮಾಡುತ್ತಿದ್ದಾರೆ. ಸರಕಾರ ಕಾಂಗ್ರೆಸ್ ಕೈಯ್ಯಲ್ಲಿದೆ. ಚುನಾವಣೆ ಬಂದಾಗ ಜನ ತೀರ್ಪು ಕೊಡಬೇಕು. ಅಲ್ಲಿಯವರೆಗೂ ಕಾಯಬೇಕು ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು ಮಾಜಿ ಪ್ರಧಾನಿಗಳು.

ಈ ಯೋಜನೆಯ ಬಗ್ಗೆ ಬೇರೆಯವ ಹೆಸರು ತೆಗೆದು ಚರ್ಚೆ ಮಾಡುವುದು ಬೇಡ. ಆ ವಿಚಾರವನ್ನು ನಾನು ಮಾತಾಡಲು ಹೋಗಲ್ಲ. ಮೂರು ತಿಂಗಳ ಹಿಂದೆ ಮಾಧ್ಯಮಗಳು ಬೆಳಗ್ಗೆ ಆರು ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಮ್ಮ ಮನೆ ಬಳಿಯೇ ಇರುತ್ತಿದ್ದವು. ಇದು ಯಾರ ಪ್ರೇರಣೆಯಿಂದ? ಅದರ ಹಿಂದೆ ಯಾರ ಶಕ್ತಿ ಇತ್ತು? ನನಗೆ ಗೊತ್ತಿದೆ, ಅದರ ಬಗ್ಗೆ ಚರ್ಚೆ ಬೇಡ. ನಮ್ಮದು ಸಣ್ಣ ರಾಜಕೀಯ ಪಕ್ಷ. ಇರಲಿ, ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ ಎಂದು ಯಾರ ಹೆಸರನ್ನೂ ಹೇಳದೆ ಕುಟುಕಿದರು.

Related Articles

Comments (0)

Leave a Comment