- ಬೆಂಗಳೂರು
 - ಮುಖ್ಯ ಮಾಹಿತಿ
 - Like this post: 0
 
ನೇರಳೆ ಮಾರ್ಗದಲ್ಲಿ ಆರು ಬೋಗಿ ರೈಲು ಸಂಚಾರ: ಸಿಎಂ ಚಾಲನೆ
- by Suddi Team
 - June 22, 2018
 - 298 Views
 
ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಆರು ಬೋಗಿಗಳ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ವಿಧಾನಸೌಧದಿಂದ ಮೆಟ್ರೋದಲ್ಲಿಯೇ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಬಂದ ಮುಖ್ಯಮಂತ್ರಿಗಳು ಅಲ್ಲಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದು ವಿಶೇಷವಾಗಿತ್ತು. ನಂತರ ತಾವೇ ಟಿಕೆಟ್ ಖರೀದಿಸಿ ಜನಸಾಮಾನ್ಯರೊಂದಿಗೆ ಬೈಯಪ್ಪನಹಳ್ಳಿಯಿಂದ ಮೆಜೆಸ್ಟಿಕ್ ವರೆಗೆ ಪ್ರಯಾಣ ಬೆಳೆಸಿದರು. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಕೆ.ಜೆ. ಜಾರ್ಜ್, ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.
ಮೂರು ಬೋಗಿಗಳ ರೈಲು ಆರು ಬೋಗಿಗಳಾಗಿ ಬದಲಾಗಿದ್ದು, 900 ಮಂದಿ ಪ್ರಯಾಣ ಮಾಡುತ್ತಿದ್ದ ರೈಲಿನಲ್ಲಿ ಇನ್ನೂ ಮುಂದೆ 1800 ಮಂದಿ ಒಮ್ಮೆಲೆ ಪ್ರಯಾಣ ಮಾಡಬಹುದಾಗಿದೆ. ಈ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರ ಬಹುದಿನಗಳ ಕನಸು ನನಸಾಗುತ್ತಿದೆ.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)