- ಮುಖ್ಯ ಮಾಹಿತಿ
- ರಾಜಕೀಯ
- ರಾಜ್ಯ
- Like this post: 0
ಸಚಿವ ಸಂಪುಟ ವಿಸ್ತರಣೆ ಮುಂದೂಡುವಂತೆ ನಾನು ರಾಹುಲ್ಗೆ ಸಲಹೆ ನೀಡಿಲ್ಲ: ಎಚ್ಡಿಡಿ
- by Suddi Team
- October 7, 2018
- 114 Views
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಂದೂಡುವಂತೆ ನಾನು ರಾಹುಲ್ ಗಾಂಧಿಯವರಿಗೆ ಸಲಹೆ ಮಾಡಿಲ್ಲ, ಅಲ್ಲದೆ ನಾನು ಅವರನ್ನು ಭೇಟಿಯೇ ಮಾಡಿಲ್ಲ. ನವದೆಹಲಿಯಲ್ಲಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದಾಗ ಎಷ್ಟು ಸಾಧ್ಯವೋ ಅಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಹೇಳಿದ್ದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಎಚ್.ಡಿ.ದೇವೇಗೌಡ, ಉಪಚುನಾವಣೆ ಮೈತ್ರಿಯ ವಿಷಯದಲ್ಲಿ ನಮ್ಮ ನಿಲುವು ಸ್ಪಷ್ಟಪಡಿಸಿದ್ದೇವೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾರು ಎಂದು ಇನ್ನೂ ನಿರ್ಧರಿಸಿಲ್ಲ. ನಿನ್ನೆಯಷ್ಟೇ ಚುನಾವಣೆ ಘೋಷಣೆಯಾಗಿದೆ. ಒಂದೆರಡು ದಿನ ಸಮಯ ಕೊಡಿ. ನಂತರ ಅಭ್ಯರ್ಥಿಯ ಘೋಷಣೆ ಮಾಡುತ್ತೇವೆ ಎಂದರು.
ಸುದ್ಧಿಗಾರರ ಪ್ರಶ್ನೆಗೆ ಉತ್ತರಿಸಿದ ದೇವೇಗೌಡ, ಸಚಿವ ಸಂಪುಟ ವಿಸ್ತರಣೆ ಮುಂದೂಡುವಂತೆ ನಾನು ರಾಹುಲ್ ಗಾಂಧಿಯವರಿಗೆ ಸಲಹೆ ಮಾಡಿಲ್ಲ, ಅಲ್ಲದೆ ನಾನು ಅವರನ್ನು ಭೇಟಿಯೇ ಮಾಡಿಲ್ಲ. ನವದೆಹಲಿಯಲ್ಲಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದಾಗ ಎಷ್ಟು ಸಾಧ್ಯವೋ ಅಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಿ, ನಿಗಮ ಮಂಡಳಿಗಳ ನೇಮಕಾತಿಯನ್ನೂ ಮಾಡಿ ಎಂದು ಹೇಳಿದ್ದೇನೆ. ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಎಷ್ಟು ಜಾಗೃತೆ ಮಾಡಬೇಕೋ ಅಷ್ಟು ಮಾಡಿದ್ದೇನೆ ಎಂದರು.
Related Articles
Thank you for your comment. It is awaiting moderation.


Comments (0)