- ಮುಖ್ಯ ಮಾಹಿತಿ
- ರಾಜ್ಯ
- Like this post: 0
ಬಿಜಿಎಸ್ ಆಸ್ಪತ್ರೆಗೆ ಸಿದ್ದಗಂಗಾ ಶ್ರೀಗಳು
- by Suddi Team
- June 21, 2018
- 137 Views
ಬೆಂಗಳೂರು: ಪಿತ್ತನಾಳದಲ್ಲಿ ಸ್ಟಂಟ್ ಅಳವಡಿಸಿ ಆರು ತಿಂಗಳಾದ ಹಿನ್ನಲೆಯಲ್ಲಿ ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಜನರಲ್ ಚೆಕ್ ಅಪ್ ಗಾಗಿ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ.
ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಮುಂಜಾನೆ ಆಗಮಿಸಿದ ಶ್ರೀಗಳು ಕಾರಿನಿಂದ ಇಳಿದು ವ್ಹೀಲ್ ಚೇರ್ ನಿರಾಕರಿಸಿ ನಡೆದುಕೊಂಡೇ ಆಸ್ಪತ್ರೆ ಒಳಗೆ ಹೋದರು. ಜನವರಿ 27 ರಂದು ಬಿಜಿಎಸ್ ಗೆ ದಾಖಲಾಗಿದ್ದ ಶ್ರೀಗಳಿಗೆ ಮೂರು ಸ್ಟಂಟ್ ಅಳವಡಿಸಲಾಗಿತ್ತು. ಅದಕ್ಕೂ ಮುನ್ನ 5 ಸ್ಟಂಟ್ ಸೇರಿ ಒಟ್ಟು 8 ಸ್ಟಂಟ್ ಅಳವಡಿಸಲಾಗಿದೆ. ಸ್ಟಂಟ್ ಅಳವಡಿಸಿ ಆರು ತಿಂಗಳಾದ ಕಾರಣ ಜನರಲ್ ಚೆಕ್ ಅಪ್ ಗಾಗಿ ಶ್ರೀಗಳು ಆಸ್ಪತ್ರೆಗೆ ಆಗಮಿಸಿದ್ದಾರೆ.
ಹಿರಿಯ ಶ್ರೀಗಳ ಜೊತೆ ಕಿರಿಯ ಶ್ರೀಗಳು ಕೂಡ ಆಸ್ಪತ್ರೆಗೆ ಆಗಮಿಸಿದ್ದು ಮಠದಿಂದಲೇ ಶ್ರೀಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ.
Related Articles
Thank you for your comment. It is awaiting moderation.


Comments (0)