ಕಾವೇರಿ ವಿಚಾರದಲ್ಲಿ ನಮ್ಮ ಸಹನೆಯೇ ದೌರ್ಬಲ್ಯವಲ್ಲ: ಸಿಎಂ
- by Suddi Team
 - June 23, 2018
 - 425 Views
 
ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಪ್ರತಿನಿಧಿ ನೇಮಕ ವಿಷಯದಲ್ಲಿ ಏಕ ಪಕ್ಷೀಯ ನಿರ್ಧಾರ ಕೈಗೊಂಡಿರುವುದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಮೊದಲೇ ಲೋಕಸಭೆಯಲ್ಲಿ ಚರ್ಚೆಯಾಗಬೇಕೆಂದು ಮನವಿ ಮಾಡಿದ್ದೆ. ಆದರೆ, ಅದನ್ನು ಪರಿಗಣಿಸಿಲ್ಲ ನಮ್ಮ ಸಹನೆಯನ್ನು ದೌರ್ಬಲ್ಯವೆಂದು ಪರಿಗಣಿಸಬೇಡಿ ಎಂದು ಸಿಎಂ ಕುಮಾರಸ್ವಾಮಿ ಖಡಕ್ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ವಿಚಾರದಲ್ಲಿ ಕೆಲವು ಲೋಪದೋಷಗಳಿದ್ದು ಅದನ್ನು ಸರಿಪಡಿಸಿದ ನಂತರ ರಾಜ್ಯದ ಪ್ರತಿನಿಧಿ ನೇಮಕ ಮಾಡುತ್ತೇವೆ. ಈ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಮಾಡಿದ್ದೆ. ಆದರೆ, ಏಕಾಏಕಿ ಈ ರೀತಿ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈಗ ಕೈಗೊಂಡಿರುವ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಕೇಂದ್ರ ಜಲಸಂಪನ್ಮೂಲ ಸಚವರನ್ನು ಭೇಟಿ ಮಾಡಿ ನಮ್ಮ ರಾಜ್ಯದ ಅಹವಾಲು ತಲುಪಿಸುತ್ತೇನೆ. ಈ ಸಂಬಂಧ ಅಡ್ವೊಕೇಟ್ ಜನರಲ್ ಅವರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಕಾವೇರಿ ನದಿ ನೀರು ವಿಚಾರದಲ್ಲಿ ನಮ್ಮ ಸಹನೆಯೇ ನಮ್ಮ ದೌರ್ಬಲ್ಯ ಅಲ್ಲ. ಪ್ರಾಧಿಕಾರ ರಚನೆಯಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯ ಬಿಟ್ಟು ಪ್ರಾಧಿಕಾರ ರಚನೆ ಆದ ಕೂಡಲೇ ನೀರಾಚರಿ ತಜ್ಞರಿಂದ ಸಲಹೆ ಪಡೆದಿದ್ದೇನೆ. ಕಾನೂನಿಗೆ ನಾವು ತಲೆ ಬಾಗಲೇಬೇಕು.
ಕೇಂದ್ರ ನೀರಾವರಿ ಸಚಿವರನ್ನೂ ಸಂಪರ್ಕ ಮಾಡಿದ್ದೇನೆ. 15 ದಿನಗಳ ಒಳಗೆ ಭೇಟಿಗೆ ಅವಕಾಶ ಮಾಡಿಕೊಡ್ತೇವೆ ಎಂದಿದ್ದಾರೆ. ಲೋಕಸಭೆಯಲ್ಲಿ ಚರ್ಚೆ ಆಗಬೇಕಿತ್ತು, ಆದ್ರೆ ಆಗಿಲ್ಲ. ಅಡ್ವೋಕೇಟ್ ಜನರಲ್ ಸಲಹೆ ಪಡೆದು ಮುಂದುವರಿತ್ತೇವೆ ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)