ವಿಧಾನಸಭೆ ಸೋಲು ಮರೆತು ಲೋಕಸಭಾ ಚುನಾವಣೆಗೆ ತಯಾರಾಗಿ: ಪರಾಜಿತ ಅಭ್ಯರ್ಥಿಗಳಿಗೆ ಪರಂ ಕರೆ
- by Suddi Team
- July 9, 2018
- 101 Views
ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ಇಂದು ಶಾಸಕರ ಭವನದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಪರಾಭವಗೊಂಡ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದರು.
ರಾಜಕೀಯ ಬೆಳವಣಿಗೆಯಿಂದಾಗಿ ಗೆಲ್ಲುವ ಶಾಸಕರು ಸಹ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಹಾಗೆಂದು ನಿರಾಶಭಾವ ತಳೆಯಬೇಡಿ. ಪಕ್ಷ ಹಾಗೂ ಕಾರ್ಯಕರ್ತರು ಸದಾ ನಿಮ್ಮೊಂದಿಗಿದ್ದಾರೆ ಎಂದು ಆತ್ಮವಿಶ್ವಾಸ ತುಂಬಿದರು. ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಎದುರಿಸಲಿದ್ದೇವೆ. ಹೀಗಾಗಿ, ಪ್ರತಿಯೊಬ್ಬರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚಿಸಿದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸದೃಢಗೊಂಡು, ವಿಧಾನಸಭಾ ಚುನಾವಣೆಯಲ್ಲಿ ಆದ ಅಷ್ಟೂ ನಷ್ಟವನ್ನು ತುಂಬಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಕ್ರಿಯರಾಗುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ನಿಯೋಜಿತ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕಾಗೋಡು ತಿಮ್ಮಪ್ಪ ಉಪಸ್ಥಿತರಿದ್ದರು.
Related Articles
Thank you for your comment. It is awaiting moderation.


Comments (0)