ಎಸ್ಸಿ, ಎಸ್ಟಿ ಮುಂಬಡ್ತಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ: ಸಿದ್ಧರಾಮಯ್ಯ ಸ್ವಾಗತ
- by Suddi Team
 - June 16, 2018
 - 79 Views
 
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಮುಂಬಡ್ತಿ ನೀಡುವ ವಿಷಯದಲ್ಲಿ ಹಿಂದಿನ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ರಾಷ್ಟ್ರಪತಿಯವರ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಹಿತ ಕಾಯುವ ಸಲುವಾಗಿ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ಅದನ್ನು ರಾಜ್ಯಪಾಲರು ರಾಷ್ಟ್ರಪತಿಯವರ ಅಂಕಿತಕ್ಕಾಗಿ ಕಳುಹಿಸಿದ್ದರು.
ಇದೀಗ ರಾಷ್ಟಪತಿಯವರು ಸುಗ್ರೀವಾಜ್ಞೆಗೆ ಒಪ್ಪಿಗೆ ಸೂಚಿಸಿರುವುದು ಸಂತಸದ ವಿಷಯವಾಗಿದೆ ಎಂದು ಸಿದ್ದರಾಮಯ್ಯ ತಿಳಿದ್ದಾರೆ.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)