ಪ್ರಮಾಣೀಕೃತ ಗುಣಮಟ್ಟದಲ್ಲಿ ಫೇಲ್; 15 ಔಷಧಗಳಿಗೆ ನಿರ್ಬಂಧ

ಬೆಂಗಳೂರು: ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು 15 ಔಷಧಗಳು/ಸೌಂದರ್ಯವರ್ಧಕಗಳನ್ನು ‘ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ’ ಎಂದು ಅಭಿಪ್ರಾಯಪಟ್ಟಿದ್ಧು, ಇವುಗಳ ಮಾರಾಟ ಮತ್ತು ಬಳಕೆಯನ್ನು ನಿರ್ಬಂಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಎಲ್ಲ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕು.  ಆಸ್ಪತ್ರೆ, ಔಷಧ ಮಳಿಗೆಗಳಲ್ಲಿ ಯಾವುದೇ ಸಂಗ್ರಹ ಇದ್ದರೆ, ಸ್ಥಳೀಯ ಔಷಧ ನಿರೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರಿಗೆ ತಕ್ಷಣವೇ ತಿಳಿಸುವಂತೆ ಉಪ ಔಷಧ ನಿಯಂತ್ರಕರು ಮತ್ತು ನಿಯಂತ್ರಣಾಧಿಕಾರಿ ಬಿ.ಪಿ. ಅರುಣ್ ತಿಳಿಸಿದ್ದಾರೆ.

ಜನರ ಸುರಕ್ಷತೆ ನಮ್ಮ ಆದ್ಯತೆ. ದಯವಿಟ್ಟು ಈ ಕೆಳಗೆ ಪಟ್ಟಿ ಮಾಡಲಾದ ಬ್ಯಾಚ್‌ನ ಔಷಧಗಳು/ಸೌಂದರ್ಯವರ್ಧಕಗಳನ್ನು ಬಳಸಬೇಡಿ ಎಂದು ಮನವಿ ಮಾಡಿದ್ದು, ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

 

Related Articles

Comments (0)

Leave a Comment