ಸಾಂಸ್ಕೃತಿಕ‌ ರಾಜಧಾನಿ ಮೈಸೂರಿಗೆ ಯೋಗ ಜಿಲ್ಲೆ ಭಾಗ್ಯ

ಬೆಂಗಳೂರು:ದೇಶದಲ್ಲಿಯೇ ಪ್ರಥಮ ಬಾರಿಗೆ ಒಂದು ಇಡೀ ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಕೈ ಹಾಕಿದ್ದು,ರಾಜ್ಯದ ಮೈಸೂರನ್ನು ‘ಯೋಗ ಜಿಲ್ಲೆಯನ್ನಾಗಿ’ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಆರೋಗ್ಯಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೈಸೂರನ್ನು ‘ಯೋಗ ಜಿಲ್ಲೆಯನ್ನಾಗಿ’ ನಿರ್ಮಿಸಲು ಯೋಜನೆ ರೂಪಿಸಿ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ, ಮೈಸೂರು ಜಿಲ್ಲೆಯ ಪ್ರತಿಯೊಂದು ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವಂತಾಗಬೇಕು ಎಂಬ ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಕೈ ಹಾಕಿದ್ದು, ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮೈಸೂರಿನ ಅರಮನೆ ಆವರಣದಲ್ಲಿ ‘ಯೋಗ ಮಹಾಕುಂಭ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಯೋಗ ದಿನಾಚರಣೆಯಂದು 15000 ಜನರು ಯೋಗಭ್ಯಾಸ ನಡೆಸಲಿದ್ದಾರೆ. 30 ಜಿಲ್ಲಾ ಕೇಂದ್ರಗಳಲ್ಲಿ ‘ಯೋಗ ಸಂಗಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರತಿ ಕಾರ್ಯಕ್ರಮದಲ್ಲಿ ಕನಿಷ್ಠ 5000 ಜನರು ಭಾಗವಹಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 7.45 ರ ವರೆಗೆ ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ ನಡೆಯಲಿದೆ ಎಂದರು.

ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಗುವುದು. ಜೂನ್ 21 ರ ಮುಂಜಾನೆ 6 ಗಂಟೆಯಿಂದ 8 ಗಂಟೆಯವರೆಗೆ 5000 ಜನರು ವಿಧಾನ ಸೌಧದ ಮೆಟ್ಟಿಲುಗಳ ಎದುರು ಯೋಗಾಭ್ಯಾಸ ನಡೆಸಲಿದ್ದಾರೆ ಎಂದರು.

 

Related Articles

Comments (0)

Leave a Comment