ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? : ಸಿದ್ದು ಕಾಲೆಳೆದ ಹೆಚ್ಡಿಕೆ
- by Suddi Team
- June 9, 2025
- 162 Views
ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು,ಸಿದ್ದರಾಮಯ್ಯ ಅವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್(ಟ್ವೀಟರ್) ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ! ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ!!ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಸಿದ್ದರಾಮಯ್ಯ ಅವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ಎಂದು ಕಾಲೆಳೆದಿದ್ದಾರೆ.
ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
Related Articles
Thank you for your comment. It is awaiting moderation.


Comments (0)