ವಿಧಾನಸಭೆಯಲ್ಲಿ ಬಿಜೆಪಿ ಜೆಡಿಎಸ್ ನಿಂದ ಅಹೋರಾತ್ರಿ ಧರಣಿ: ಸದನದಲ್ಲೇ ಮಲಗಿದ ಸದಸ್ಯರು

ಬೆಂಗಳೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜೀನಾಮೆಗೆ ಸಚಿವ ತಿಮ್ಮಾಪುರ ನಿರಾಕರಿಸಿದ ಹಿನ್ನಲೆಯಲ್ಲಿ ಬಿಜೆಪಿ ಹಾಗು ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.ವಿಧಾನಸಭೆಯ ಒಳಗೆ ಮಲಗುವ ಮೂಲಕ ಅಹೋರಾತ್ರಿ ಸತ್ಯಾಗ್ರಹ ಮುಂದುವರಿಸಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಅಬಕಾರಿ ಇಲಾಖೆ ಜಗರಣ ಪ್ರಕರಣ ಭಾರಿ ಸದ್ದು ಮಾಡಿತು. ಅಬಕಾರಿ ಇಲಾಖೆಯಲ್ಲಿ ಸುಮಾರು 6,000 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಲಾಯಿತು. ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಿದರು‌.ಆದರೂ ಸಚಿವ ತಿಮ್ಮಾಪುರ ರಾಜೀನಾಮೆಗೆ ಸರ್ಕಾರ ನಿರಾಕರಿಸಿತು, ಸರ್ಕಾರದ ಈ ನಿಲುವಿಗೆ ಆಕ್ರೋಶ ವ್ಯಕ್ತಪಡಿಸಿದ ಬಿಬೆಪಿ ಹಾಗು ಜೆಡಿಎಸ್ ಸದಸ್ಯರು ಅಬಕಾರಿ ಸಚಿವರು ರಾಜೀನಾಮೆ ನೀಡುವವರೆಗೆ ಅಹೋರಾತ್ರಿ ಪ್ರತಿಭಟಿಸುತ್ತೇವೆ ಎನ್ನುವ ನಿರ್ಧಾರ ಪ್ರಕಟಿಸಿ ಸದನದಲ್ಲಿ ಧರಣಿ ಆರಂಭಿಸಿದ್ದಾರೆ.

ಧರಣಿ ನಿರತ ಶಾಸಕರು ವಿಧಾನಸಭೆಯ ಒಳಗೆ ಮಲಗುವ ಮೂಲಕ ಅಹೋರಾತ್ರಿ ಸತ್ಯಾಗ್ರಹ ಮುಂದುವರಿಸಿದ್ದಾರೆ.ಸಚಿವರ ರಾಜೀನಾಮೆವರೆಗೂ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

Related Articles

Comments (0)

Leave a Comment