ಬಾನುಮುಷ್ತಾಕ್ ಗೆ ಬಿಜೆಪಿ ವಿರೋಧ; ರಾಜಕೀಯವಾಗಿಯೇ ಪ್ರತ್ಯುತ್ತರವೆಂದ ಸಿಎಂ!
- by Suddi Team
- September 6, 2025
- 5 Views

ವಿಜಯಪುರ: ಸಾಹಿತಿ ಬಾನು ಮುಷ್ತಾಕ್ ರವರು ನಾಡಹಬ್ಬ ಉದ್ಘಾಟಿಸುವುದಕ್ಕೆ ಬಿಜೆಪಿ ರಾಜಕೀಯ ದುರುದ್ದೇಶದಿಂದ ವಿರೋಧಿಸುತ್ತಿದ್ದು, ನಮ್ಮ ಸರ್ಕಾರ ಕೂಡ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸಿ, ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದಾರೆ, ಈ ವಿಷಯವನ್ನು ಕೋರ್ಟ್ ತೀರ್ಮಾನಿಸಲಿ ಎಂದರು.
ಈ ಹಿಂದೆ ಸಾಹಿತಿ ನಿಸ್ಸಾರ್ ಅಹ್ಮದ್ ಅವರು ಉದ್ಘಾಟಿಸುವುದನ್ನು ಯಾರು ವಿರೋಧಿಸಿರಲಿಲ್ಲ. ಟಿಪ್ಪು ಸುಲ್ತಾನ್ , ಮಿರ್ಜಾ ಇಸ್ಮಾಯಿಲ್ ಮೆರವಣಿಗೆಗಳನ್ನು ಏಕೆ ವಿರೋಧಿಸಲಿಲ್ಲ. ಬಿಜೆಪಿಯವರು ಬಾನು ಮುಷ್ತಾಕ್ ರವರು ರಾಜಕೀಯ ದುರುದ್ದೇಶದಿಂದ ನಾಡಹಬ್ಬ ಉದ್ಘಾಟಿಸುವುದನ್ನು ವಿರೋಧಿಸುತ್ತಿದ್ದು, ಸರ್ಕಾರ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡಲಿದೆ. ಬಾನು ಮುಷ್ತಾಕ್ ರವರು ಕನ್ನಡಾಂಬೆಯ ಬಗ್ಗೆ ಹೀಗಳೆದು ಮಾತನಾಡಿರುವ ಬಗ್ಗೆ ಯಾವ ಪುರಾವೆಯಿಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬುಕರ್ ಪ್ರಶಸ್ತಿ ಬಂದಿದೆ. ಆದ್ದರಿಂದ ರಾಜ್ಯ ಸರ್ಕಾರ ಸಾಹಿತಿಗಳಾದ ಬಾನು ಮುಷ್ತಾಕ್ ಹಾಗು ಅನುವಾದಿಸಿದ ದೀಪಾ ಬಸ್ತಿಯವರಿಗೆ ಸನ್ಮಾನಿಸಲಾಗಿದೆ. ಬಾನು ಮುಷ್ತಾಕ್ ರವರು ಕನ್ನಡ ಸಾಹಿತಿಯಾಗಿರುವ ಕಾರಣ ಅವರಿಂದ ದಸರಾವನ್ನು ಉದ್ಘಾಟಿಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡರು.
Related Articles
Thank you for your comment. It is awaiting moderation.
Comments (0)