ಬಿಜೆಪಿಯವರು ಧರ್ಮಸ್ಥಳ ಬದಲು ದೆಹಲಿಯಲ್ಲಿ ಹೋರಾಟ ಮಾಡಲಿ;ಡಿಕೆ ಶಿವಕುಮಾರ್
- by Suddi Team
- August 31, 2025
- 25 Views

ಬೆಂಗಳೂರು: ಧರ್ಮಸ್ಥಳ ಯಾತ್ರೆ ಮಾಡುತ್ತಿರುವ “ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ಬಿಜೆಪಿಯವರು ಧರ್ಮಸ್ಥಳಕ್ಕೆ ಹೋಗಿ ತಮ್ಮ ವೈಯಕ್ತಿಕ ಲಾಭಕ್ಕೆ ಪ್ರಾರ್ಥನೆ ಮಾಡಿಕೊಂಡು ಬರುತ್ತಾರೆಯೇ ಹೊರತು ಬೇರೇನೂ ಇಲ್ಲ. ಇವರ ಹೋರಾಟ ಧರ್ಮಸ್ಥಳದಲ್ಲಿ ಅಲ್ಲ, ಎಲ್ಲಾ ಸಂಸದರು, ಶಾಸಕರನ್ನು ಕರೆದುಕೊಂಡು ಹೋಗಿ ದೆಹಲಿಯಲ್ಲಿ ಹೋರಾಟ ಮಾಡಬೇಕು. ರಾಜ್ಯಕ್ಕೆ ಅನುದಾನ ತರಬೇಕು” ಎಂದು ಛೇಡಿಸಿದರು.
ಸಗಣಿ ಮೇಲೆ ಕಲ್ಲು ಹಾಕಲ್ಲ:
ಶಿವಕುಮಾರ್ ಗೆ ಶಾಸಕರ ಬೆಂಬಲ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಕರೆದುಕೊಳ್ಳುತ್ತಿಲ್ಲ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, “ಕಸ, ಸಗಣಿ ಮೇಲೆ ಕಲ್ಲನ್ನು ಹಾಕುವುದಕ್ಕೆ ನಾನು ಇಷ್ಟಪಡುವುದಿಲ್ಲ” ಎಂದು ತಿರುಗೇಟು ನೀಡಿದರು.
Related Articles
Thank you for your comment. It is awaiting moderation.
Comments (0)