ನಾವು ಒಟ್ಟಾಗಿದ್ದೇವೆ; ಡಿಕೆ ಶಿವಕುಮಾರ್ ಕೈಹಿಡಿದು ಪೋಸ್ ಕೊಟ್ಟ ಸಿಎಂ
- by Suddi Team
- June 30, 2025
- 231 Views

ಮೈಸೂರು: ಕಾಂಗ್ರೆಸ್ನಲ್ಲಿ ಆಂತರಿಕ ಅಸಮಧಾನ ಭುಗಿಲೆದ್ದಿದ್ದು, ಹೈಕಮಾಂಡ್ ರಂಗಪ್ರವೇಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಪ್ರಭಾವಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಜತೆ ಕೈಕುಲುಕಿ ಮಾಧ್ಯಮಗಳಿಗೆ ಕೈ ಎತ್ತಿ ಹಿಡಿದು ಸಿಎಂ ಸಿದ್ದರಾಮಯ್ಯ ಪೋಸ್ ಕೊಟ್ಟಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ. ಯಾರು ಏನೇ ಹೇಳಿದರೂ ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.
Related Articles
Thank you for your comment. It is awaiting moderation.
Comments (0)