ಮದ್ದೂರು ಘಟನೆಗೆ ಕಾಂಗ್ರೆಸ್ ಸರಕಾರವೇ ಕಾರಣ; ಕುಮಾರಸ್ವಾಮಿ ಆರೋಪ
- by Suddi Team
- September 9, 2025
- 125 Views
ನವದೆಹಲಿ: ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಮದ್ದೂರು ಘಟನೆಗೆ ಕಾರಣ.ಹಿಂದೂ ಸಮುದಾಯಕ್ಕೆ ಅಸಮಾಧಾನ ಆಗುವ ರೀತಿ ಸರಕಾರ ನಡೆದುಕೊಳ್ಳುತ್ತಿದೆ,ಮಂಡ್ಯ ಜಿಲ್ಲೆಗೆ ಬೆಂಕಿ ಹಾಕುವ ಕೆಲಸವನ್ನು ಕೆಲ ಶಕ್ತಿಗಳು ಮಾಡುತ್ತಿವೆ, ಜನರು ಅಂಥವರಿಗೆ ಅವಕಾಶ ಕೊಡಬಾರದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರಕಾರವೇ ಕಾರಣ ಎಂದು ದೂರಿದರು.
ಈ ಹಿಂದೆ ಇಂಥ ಘಟನೆಗಳು ಒಂದೆರಡು ಜಿಲ್ಲೆಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತಿದ್ದವು. ಕಾಂಗ್ರೆಸ್ ಸರಕಾರ ಬಂದ ಮೇಲೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತೀ ಭಾಗದಲ್ಲಿಯೂ ಅವ್ಯಾಹತವಾಗಿ ನಡೆಯುತ್ತಿವೆ. ಆ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಆಡಳಿತದಲ್ಲಿ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಕೇವಲ ಓಲೈಕೆ ರಾಜಕಾರಣದಿಂದ ಇಷ್ಟೆಲ್ಲಾ ನಡೆಯುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.
ಇಂಥ ಗಳಭೆಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆ. ಇದೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸುಸೈಡ್ (ಆತ್ಮಹತ್ಯೆ) ಆಗಲಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಆಗಬಾರದು. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದರು.
Related Articles
Thank you for your comment. It is awaiting moderation.


Comments (0)