ಧರ್ಮಸ್ಥಳ ಪ್ರಕರಣ; ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾಗೆ ದೂರು ನೀಡಿದ ಬಿಜೆಪಿ

ದೆಹಲಿ: ಧರ್ಮಸ್ಥಳ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಧರ್ಮಸ್ಥಳ ಚಲೋ ಅಭಿಯಾನ ಮಾಡಿದ್ದ ಬಿಜೆಪಿ ತನ್ನ ಹೋರಾಟದ ಸ್ವರೂಪವನ್ನು ಬದಲಿಸಿಕೊಂಡಿದ್ದು, ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಕಯದ ಕದ ತಟ್ಟಿದೆ.

ನವದೆಹಲಿಗೆ ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ‌ ಬಿವೈ ವಿಜಯೇಂದ್ರ ನೇತೃತ್ವದ ರಾಜ್ಯ ಬಿಜೆಪಿ ನಿಯೋಗ, ರಾಜ್ಯ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ನಿಲುವು,ನಿರ್ಧಾರಗಳ ಕುರಿತು ವಿವರ ನೀಡಿತು. ಧರ್ಮಸ್ಥಳ ವಿಚಾರವಾಗಿ ಯಾವ ರೀತಿ ಷಡ್ಯಂತ್ರ ನಡೆಯುತ್ತಿದೆ. ಈ ಷಡ್ಯಂತ್ರದ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂಬ ವಿಚಾರವನ್ನು ಅಮಿತ್ ಶಾ ಗಮನಕ್ಕೆ ತಂದಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿಚಾರಗಳಾದ ಧರ್ಮಸ್ಥಳ ವಿಚಾರ, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ, ಕೊಪ್ಪಳದಲ್ಲಿ ಹಿಂದೂ ಕಾರ್ಯಕರ್ತ ಗವಿಸಿದ್ದಪ್ಪ ಅವರ ಹತ್ಯೆ, ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ದಿನೇ ದಿನೇ ಹದಗೆಟ್ಟಿರುವುದು ಮತ್ತು ಸಚಿವ ಸಂಪುಟದಲ್ಲಿ ಕೆಲವು ಕೇಸ್‍ಗಳನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಬಗ್ಗೆ ಎಲ್ಲ ವಿಚಾರವಾಗಿ ಮತ್ತು ಸವಿಸ್ತಾರವಾಗಿ ಗೃಹ ಸಚಿವರ ಗಮನಕ್ಕೆ ತಂದು ಚರ್ಚೆಯನ್ನು ಮಾಡಿದ್ದೇವೆ ಎಂದು ವಿವರಿಸಿದರು.

ರಾಜ್ಯದಲ್ಲಿ ಯಾವ ರೀತಿ ಪೊಲೀಸ್ ವ್ಯವಸ್ಥೆಯು ಕುಸಿದು ಬಿದ್ದಿದೆ ಹಾಗೂ ಪೊಲೀಸರಿಗೆ ಯಾವುದೇ ರೀತಿಯ ಅಧಿಕಾರ ಸರ್ಕಾರ ನೀಡದಿರುವ ಬಗ್ಗೆಯೂ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದರು.

Related Articles

Comments (0)

Leave a Comment