ಸೌಜನ್ಯ ಕುಟುಂಬ ಸುಪ್ರೀಂ ಕೋರ್ಟ್ ಗೆ ಹೋದರೆ ವೆಚ್ಚ ಭರುಸುತ್ತೇವೆ; ಬಿ.ವೈ. ವಿಜಯೇಂದ್ರ
- by Suddi Team
- September 1, 2025
- 130 Views
ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ): ಕು.ಸೌಜನ್ಯರ ಕೊಲೆ ವಿಚಾರವಾಗಿ ಅವರ ಕುಟುಂಬ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದರೆ, ಅಲ್ಲಿನ ಸಂಪೂರ್ಣ ವೆಚ್ಚವನ್ನು ಬಿಜೆಪಿ ಭರಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ. ಪ್ರೀತಮ್ ಗೌಡ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಶಾಸಕರಾದ ಗುರುರಾಜ್ ಗಂಟಿಹೊಳೆ ಮತ್ತು ಸಿಮೆಂಟ್ ಮಂಜುನಾಥ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್‍ಗೌಡ ಮತ್ತು ಶರಣು ತಳ್ಳಿಕೇರಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡಂಜಿ ಅವರು ಇಂದು ಕು. ಸೌಜನ್ಯ ಅವರ ಮನೆಗೆ ಭೇಟಿ ಕೊಟ್ಟರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಅವರ ತಾಯಿ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದೇವೆ. ಇಂದು ಬೆಳಿಗ್ಗೆ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರ ಜೊತೆ ಮಾತನಾಡಿದ್ದೆ. ಅಲ್ಲದೇ ಇಲ್ಲಿಗೆ ಬರುವ ಅಪೇಕ್ಷೆ ವ್ಯಕ್ತಪಡಿಸಿದ್ದೆ. ಸಮಾವೇಶ ಮುಗಿದ ಬಳಿಕ ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.
ನಾವು ನಿಮ್ಮ ಜೊತೆ ಸಂಪೂರ್ಣವಾಗಿ ಇದ್ದೇವೆ ಎಂದು ತಿಳಿಸಿದ್ದಾಗಿ ಹೇಳಿದರು. ಸೌಜನ್ಯರ ತಾಯಿ, ಮಗಳ ಸಾವಿನ ನೋವಿನಿಂದ ಇನ್ನೂ ಹೊರಬಂದಿಲ್ಲ ಎಂದು ಅವರು ತಿಳಿಸಿದರು.
Related Articles
Thank you for your comment. It is awaiting moderation.


Comments (0)