ಯಾರು ಯಾವಾಗ ಮಠವನ್ನು ಹೇಗೆ ಬಳಸಿಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ: ಡಿಕೆ ಸುರೇಶ್
- by Suddi Team
- December 1, 2025
- 15 Views
ದೇವನಹಳ್ಳಿ:ಮುಖ್ಯಮಂತ್ರಿ ಬದಲಾವಣೆ ವಿಚಾರದ ಗೊಂದಲ ಕುರಿತು“ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು,ಸಧ್ಯದಲ್ಲೇ ಎಲ್ಲಾ ಒಂದು ಹಂತಕ್ಕೆ ಬರಲಿದೆ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ಸಿಎಂ ಬದಲಾವಣೆ ವಿಚಾರವಾಗಿ ನೀವು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದೀರಾ ಎಂದು ಕೇಳಿದಾಗ, “ನನ್ನ ಖಾಸಗಿ ಭೇಟಿ ಬಗ್ಗೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಉಪಾಹಾರ ಕೂಟ ನಡೆದಿದ್ದು, ಮಂಗಳವಾರವೂ ಒಂದು ಉಪಾಹಾರಕೂಟ ನಡೆಯಲಿದೆ.” ಎಂದರು.
ಇಬ್ಬರೂ ನಾಯಕರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದರು.
ಸಹೋದರನ ಮೂಲಕ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಇದನ್ನು ನೀವು (ಮಾಧ್ಯಮ) ಹೇಳುತ್ತಿದ್ದೀರಿ” ಎಂದರು.
ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇದಕ್ಕೆ ರಾಜಕೀಯವಾಗಿ ಉತ್ತರ ಕೊಡುವುದಕ್ಕಿಂತ, ಯಾರು ಯಾವ ಸಂದರ್ಭದಲ್ಲಿ ಮಠವನ್ನು ಹೇಗೆ ಬಳಸಿಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಿದ್ದು, ನಾನು ಹೆಚ್ಚಾಗಿ ಹೇಳುವ ಅಗತ್ಯವಿಲ್ಲ” ಎಂದು ತಿಳಿಸಿದರು.
Related Articles
Thank you for your comment. It is awaiting moderation.


Comments (0)