ಕ್ಯಾಬಿನೆಟ್ ನಲ್ಲಿ ಖಾಸಗಿ ಆಸ್ಪತ್ರೆಗಳ ದರ ನಿಗದಿ – ಆರೋಗ್ಯ ಸಚಿವ ಶ್ರೀರಾಮುಲು
- by Suddi Team
- June 19, 2020
- 43 Views

ಬೆಂಗಳೂರು: ಕೋವಿಡ್ 19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಮಾಡುವ ವಿಚಾರ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಮಾಧ್ಯಮಗಳಿಗೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ದರ ನಿಗದಿ ವಿಚಾರ ನಿನ್ನೆಯ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ ಆಗಿದೆ. ಈ ವೇಳೆ ಬೇರೆ ರಾಜ್ಯಗಳ ಖಾಸಗಿ ಆಸ್ಪತ್ರೆಗಳಲ್ಲಿ ಇರುವ ದರಗಳ ಬಗ್ಗೆ ಕೂಡಾ ಪರಿಶೀಲಿಸಿದ್ದೇವೆ. ಈ ಬಗ್ಗೆ ಸಿಎಂ ಗಮನಕ್ಕೆ ಕೂಡಾ ತಂದಿದ್ದೇವೆ. ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಸಿಎಂ ಹೇಳಿದ್ದಾರೆ.ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳುವವರೆಗೆ ದರ ನಿಗದಿ ಅಧಿಕೃತ ನಿರ್ಧಾರ ಆಗುವುದಿಲ್ಲ. ಖಾಸಗಿ ಆಸ್ಪತ್ರೆಗಳು ಹೇಳಿರುವ ದರ ಹೇಳಿದ್ದು, ಅದು ಅವರ ಬೇಡಿಕೆ ಆಗಿದೆ. ರಾಜ್ಯ ಸರ್ಕಾರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಎಷ್ಟು ದರ ನಿಗದಿ ಮಾಡಬೇಕು ಅಂತಾ ಸಿಎಂ ಮತ್ತು ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
Related Articles
Thank you for your comment. It is awaiting moderation.
Comments (0)