10 ದಿನದಲ್ಲಿ ಶಿರಾಡಿಘಾಟ್ ಸಂಚಾರ ಮುಕ್ತ: ರೇವಣ್ಣ
- by Suddi Team
- July 1, 2018
- 384 Views
ಹಾಸನ: ಇನ್ನು 10 ದಿನಗಳೊಳಗೆ ಶಿರಾಡಿ ಘಾಟ್ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ
ಮಾತನಾಡಿದ ಸಚಿವ ರೇವಣ್ಣ,ಕಳೆದ ಐದು ತಿಂಗಳಿನಿಂದ ರಸ್ತೆ ಕಾಂಕ್ರಿಟೀಕರಣಕ್ಕಾಗಿ ಬಂದ್ ಆಗಿದ್ದ ಹಾಸನ ಮಂಗಳೂರು ಹೆದ್ದಾರಿ ಕಾಮಗಾರಿ ಬಹುತೇಕ ಮುಗಿದಿದೆ.ಶೀಘ್ರವೇ ಸ್ಥಳ ಪರಿಶೀಲನೆ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸೊದಾಗಿ ಲೋಕೋಪಯೋಗಿ ಸಚಿವರು ಭರವಸೆ ನೀಡಿದರು.
10 ಕೋಟಿ ವೆಚ್ಚದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯರಿಗೆ ಹಾಸ್ಟಲ್ ನಿರ್ಮಾಣ ಮಾಡಲಾಗುತ್ತಿದೆ.ಹಾಸನ ವೈದ್ಯಕೀಯ ಆಸ್ಪತ್ರೆಯನ್ನು135 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಲಿದ್ದಾರೆ. ಈ ಸಲದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಗ್ಯಾರಂಟಿ.ರೈತರ ಸಾಲ ಮನ್ನಾ ಬಗ್ಗೆ ಯಾವುದೇ ಅನುಮಾನ ಬೇಡ,ಈಗಾಗಲೇ ಸಾಲಮನ್ನಾ ಸಂಬಂಧ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಹಾಗಾಗಿ ರೈತರು ಆತಂಕಪಡಬೇಕಿಲ್ಲ ಎಂದು ರೇವಣ್ಣ ಹೇಳಿದರು.
Related Articles
Thank you for your comment. It is awaiting moderation.
Comments (0)