1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ:ಬಿಸಿ ನಾಗೇಶ್
- by Suddi Team
- October 16, 2021
- 104 Views
ಬೆಂಗಳೂರು: 1 ರಿಂದ 5ನೇ ತರಗತಿ ಶಾಲೆ ತೆರೆಯುವ ವಿಚಾರ ಸಂಬಂಧ ಇನ್ನೆರಡು ದಿನಗಳಲ್ಲಿ ನಿರ್ಧಾರ ಮಾಡಲಾಗುತ್ತದೆ.ಮುಖ್ಯಮಂತ್ರಿಗಳು ಸಭೆ ನಿಗಧಿ ಮಾಡ್ತಾರೆ. ಅಲ್ಲಿ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ.ಶನಿವಾರ ಭಾನುವಾರ ತರಗತಿ ನಡೆಸುವ ಬಗ್ಗೆ ಚಿಂತನೆ ಇದೆ. ಆದರೆ ಪಠ್ಯ ಕಡಿತ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, 1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.ಒಂದರಿಂದ ಐದನೇ ತರಗತಿ ಆರಂಭಕ್ಕೆ ಅಗತ್ಯವುಳ್ಳ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಿ.ಇ. ಒ.ಗಳು, ಡಿ.ಡಿ.ಪಿ.ಐಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.
ಆದರೆ ತಾಂತ್ರಿಕ ಸಲಹಾ ಸಮಿತಿ ಏನು ಹೇಳುತ್ತೇ ಎಂಬುದನ್ನು ನೋಡಬೇಕು.ಒಂದು ವೇಳೆ ಅವ್ರು ಹಂತ ಹಂತವಾಗಿ ಶಾಲೆ ಆರಂಭಿಸಿ ಅಂದರೆ,1 ರಿಂದ 2 ಹಾಗೂ 3 ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ.ಒಂದು ವೇಳೆ ಈ ರೀತಿ ನಿರ್ಧಾರ ಆದರೂ ಸಮಯ ಜಾಸ್ತಿ ತಗೊಳಲ್ಲ.ಒಂದು ಹತ್ತು ದಿನಗಳಲ್ಲಿ ಉಳಿಕೆ ತರಗತಿ ಗಳ ಬಗ್ಗೆ ಆರಂಭಿಸುವ ಬಗ್ಗೆ ನಿರ್ಧಾರ ಮಾಡ್ತೇವೆ
ಸದ್ಯಕ್ಕೆ ಇದುವರೆಗೂ ಶಾಲೆ ಆರಂಭಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದಿಲ್ಲ.ಸಿಎಂ ಸಭೆಗೆ ಸಮಯ ಕೊಟ್ಟ ಕೂಡಲೇ, ತಜ್ಞರಿಂದ ಅಭಿಪ್ರಾಯ ಪಡೆಯುತ್ತೇವೆ. ಆ ನಂತರ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಮಾಡ್ತೇವೆ ಈಗಾಗಲೇ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ದತೆ ನಡೆಸಿದೆ ಎಂದ್ರು.
ಪಠ್ಯ ಕ್ರಮ ಕಡಿಮೆ ಮಾಡುವುದಿಲ್ಲ:
ಪಠ್ಯ ಕ್ರಮ ಕಡಿಮೆ ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ. ಶನಿವಾರ ಪೂರ್ಣದಿನ ಹಾಗೂ ಭಾನುವಾರ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ. ಪರೀಕ್ಷೆಗೆ ಅಗತ್ಯವಿದ್ದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡುವ ಬಗ್ಗೆ ಜನವರಿ-ಫೆಬ್ರವರಿಯಲ್ಲಿ ನಿರ್ಧರಿಸಲಾಗುವುದು ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದ್ರು.
Related Articles
Thank you for your comment. It is awaiting moderation.


Comments (0)