ರಂಭಾಪುರಿ ಜಗದ್ಗುರುಗಳ ಜುಲೈ ತಿಂಗಳ ಪ್ರವಾಸದ ವಿವರ

ರಂಭಾಪುರಿ ಪೀಠ(ಬಾಳೆಹೊನ್ನೂರು): ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ 2025ನೇ ಸಾಲಿನ ಜುಲೈ ತಿಂಗಳ ಪ್ರವಾಸ ಕಾರ್ಯಕ್ರಮದ ಸಮಗ್ರ ಮಾಹಿತಿಯನ್ನು ಶ್ರೀ ಜಗದ್ಗುರು ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ಟೂರ್ ನೀಡಿದ್ದಾರೆ.

ಜುಲೈ 6ರ ವರೆಗೆ ವಿವಿಧೆಡೆಯಲ್ಲಿ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭನಡೆಸಲಿದ್ದು 2ರಿಂದ 4 ರವರೆಗೆ ಬೆಂಗಳೂರಿನ ವಿಜಯನಗರದಲ್ಲಿ ಇಷ್ಟಲಿಂಗ ಮಹಾಪೂಜಾ ನಡೆಸುವರು. 7ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕ ಚಿಪ್ಪಲಕಟ್ಟಿ ಗ್ರಾಮದಲ್ಲಿ ಹಿರೇಮಠ ಕಲ್ಲಯ್ಯನವರ ಷಷ್ಟ್ರಬ್ಬಿ ಸಮಾರಂಭ, 8ರಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕ ಬುಕ್ಕಾಂಬುಧಿ ಕ್ಷೇತ್ರದಲ್ಲಿ ಲಿಂ. ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳವರ ಶುಭಾಗಮನ ಶತಮಾನೋತ್ಸವದ ಪೂರ್ವಭಾವಿ ಸಮಾವೇಶದ ಸಾನ್ನಿಧ್ಯ ವಹಿಸುವರು.

ಜುಲೈ 10ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಗುರು ಪೂರ್ಣಿಮಾ ನಿಮಿತ್ಯ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. ಜುಲೈ 13ರಂದು ಚನ್ನರಾಯಪಟ್ಟಣ ತಾಲೂಕ ನಾಗರನವಿಲೆಯಲ್ಲಿ ಶ್ರೀ ಜಗದ್ಗುರು ರೇಣುಕ ಪೂಜಾ ಮಂಟಪ ಸಮರ್ಪಣೆ ಸಮಾರಂಭದ ಸಾನ್ನಿಧ್ಯ ವಹಿಸುವರು.

ಜುಲೈ 14ರಿಂದ 16ರ ವರೆಗೆ ಹರಿಹರ ನಗರದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ, 18ರಿಂದ 22ರ ವರೆಗೆ ದಾವಣಗೆರೆ ಮಹಾನಗರದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ ನಡೆಸುವರು. ಜುಲೈ 24ರಂದು ಚನ್ನಗಿರಿ ತಾಲೂಕ ತಾವರೆಕೆರೆ ಶಿಲಾಮಠದಲ್ಲಿ ಲಿಂ. ಶ್ರೀ ಸಿದ್ದಲಿಂಗ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವ ಸಮಾರಂಭ, ಜುಲೈ 25ರಿಂದ ಆಗಸ್ಟ್ 23ರ ವರೆಗೆ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ 34ನೇ ವರ್ಷದ ಶ್ರಾವಣ ಮಾಸದ ಇಷ್ಟಲಿಂಗ ಪೂಜಾನುಷ್ಠಾನ ಹಾಗೂ ಪುರಾಣ ಪ್ರವಚನ ಸಮಾರಂಭದ ಸಾನ್ನಿದ್ಯ ವಹಿಸುವರು.

ಜುಲೈ 21 ಮತ್ತು 22ರಂದು ದಾವಣಗೆರೆಯಲ್ಲಿ ಶ್ರೀಮದ್ದೀರಶೈವ ಮಹಾಮತ ಸಂಸ್ಥಾಪನಾಚಾರ್ಯ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯ ಪರಂಪರಾನುಗತ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. ಶ್ರೀ ರಂಭಾಪುರಿ ಜಗದ್ಗುರುಗಳವರ ಧಾರ್ಮಿಕ ಕಾರ್ಯಕ್ರಮಗಳ ಲಾಭವನ್ನು ಸಮಸ್ತ ಜನತೆ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Related Articles

Comments (0)

Leave a Comment