ನವೆಂಬರ್-17 ರಂದು ಉಗರಗೊಳದ ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ
- by Suddi Team
- November 14, 2025
- 17 Views
ಬೆಳಗಾವಿ :ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗು ಧರ್ಮ ಜಾಗೃತಿ ಸಮಾರಂಭ ಕಾರ್ತೀಕ ಮಾಸದ ಕೊನೆಯ ಸೋಮವಾರ(ನವೆಂಬರ್ -17 ರಂದು) ಜರುಗಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗುವವು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಪೂಜ್ಯ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು 108 ಪೂರ್ಣ ಕುಂಭಗಳು ಸೇರಿದಂತೆ ವಿವಿಧ ಜನಪದ ವಾದ್ಯ- ಮೇಳಗಳೊಂದಿಗೆ ಉಗರಗೋಳ ಗ್ರಾಮದಲ್ಲಿ ನಡೆಯಲಿದ್ದು, ನಂತರ ಮಹಾಪ್ರಸಾದದ ದಾಸೋಹ ಜರುಗಲಿದೆ.
ಲಕ್ಷ ದೀಪೋತ್ಸವ: ಇದೇ ದಿನ ಸಂಜೆ 5.30 ಗಂಟೆಗೆ ನಡೆಯುವ ಧರ್ಮ ಜಾಗೃತಿ ಸಮಾರಂಭಲ್ಲಿ ಹೂಲಿ ಸಾಂಬಯ್ಯನವರಮಠದ ಶ್ರೀಉಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಉಗರಗೋಳ ನಿರ್ವಾಣೇಶ್ವರಮಠದ ಶ್ರೀಮಹಾಂತ ಸ್ವಾಮೀಜಿ ಮತ್ತು ರಾಮಾರೂಢಮಠದ ಶ್ರೀಬ್ರಹ್ಮಾರೂಢ ಸ್ವಾಮೀಜಿ ಸಾನ್ನಿಧ್ಯವಹಿಸುವರು.
ಸವದತ್ತಿ ಶಾಸಕ ವಿಶ್ವಾಸ ವೈದ್ಯ ಲಕ್ಷ ದೀಪೋತ್ಸವ ಉದ್ಘಾಟಿಸಲಿದ್ದು, ಬೆಂಗಳೂರಿನ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಮಹೇಶ ಆರ್. ಹಿರೇಮಠ ಅಧ್ಯಕ್ಷತೆವಹಿಸುವರು. ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಸಿದ್ಧನಗೌಡ ಗೂಢರಾಶಿ, ಸವದತ್ತಿ ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿನಮಠ, ಸವದತ್ತಿ ತಾ.ಪಂ. ವ್ಯವಸ್ಥಾಪಕ ಮಲ್ಲಿಕಾರ್ಜುನಯ್ಯ ಕಂಬಿ, ಸವದತ್ತಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಅಲ್ಲಮಪ್ರಭು ಪ್ರಭೂನವರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಬೆಳಗಾವಿ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ವಿರೂಪಾಕ್ಷಪ್ಪ ಮಾಮನಿ ಸೇರಿದಂತೆ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಸವದತ್ತಿ, ಹುಕ್ಕೇರಿ, ಉಗರಗೋಳ, ಹರ್ಲಾಪೂರ, ಹಂಚಿನಾಳ, ಮುನವಳ್ಳಿ ಗ್ರಾವiಗಳ ವಿವಿಧ ಕ್ಷೇತ್ರಗಳ ಗಣ್ಯರು, ರೈತ ನಾಯಕರು, ಯುವ ಧುರೀಣರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಗುರುರಕ್ಷೆ ಗೌರವ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಳೋಜಿ, ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಜುನಾಥ ಯಕ್ಕುಂಡಿ ಮತ್ತು ಧರ್ಮಪ್ಪ ಚಂದರಗಿ, ಜಗದೀಶ ಬೂದಣ್ಣವರ, ಕು. ವಿಶ್ವನಾಥ ಅಂಗಡಿ ಅವರಿಗೆ ಗುರುರಕ್ಷೆಯ ಗೌರವ ನೀಡಲಾಗುವುದು. 2024-25ರಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕಗಳನ್ನು ಸಂಪಾದಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ವಿವಿಧ ಜನಪದ ಕಲಾತಂಡಗಳು ಪಾಲ್ಗೊಳ್ಳುತ್ತಿದ್ದು, ಸಂಗೀತ ಅಧ್ಯಾಪಕ ಡಾ.ಅರ್ಜುನ ವಠಾರ ಮತ್ತು ಡಾ.ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯ ಕಲಾ ಬಳಗದಿಂದ ವಿವಿಧ ಸಂಗೀತ ಕಾರ್ಯಕ್ರಮಗಳು ಜರುಗಲಿವೆ. ಈ ಧರ್ಮ ಸಮಾರಂಭದಲ್ಲಿ ಎಲ್ಲರೂ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಕೃಪಾಕಾರುಣ್ಯಕ್ಕೆ ಪಾತ್ರರಾಗಬೇಕೆಂದು ಶ್ರೀಮಠದ ಸಂಚಾಲಕರು ಮಾಧ್ಯಮ ಪ್ರಕಟಣೆಯಲ್ಲಿ ಕೋರಿದ್ದಾರೆ.
Related Articles
Thank you for your comment. It is awaiting moderation.


Comments (0)