ಭಾರತ–ಶ್ರೀಲಂಕಾ ಮೊದಲ ಏಕದಿನ ಪಂದ್ಯದ ಸ್ಥಳ ಬದಲಾವಣೆಗೆ ಮನವಿ

ನವದೆಹಲಿ: ಭಾರತ–ಶ್ರೀಲಂಕಾ ಏಕದಿನ ಸರಣಿಯ ಮೊದಲ ಪಂದ್ಯವನ್ನು ದೆಹಲಿಯಿಂದ ಬೇರೆಡೆಗೆ ಸ್ಥಳಾಂತರಿಸುವಂತೆ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಬಿಸಿಸಿಐಗೆ ಮನವಿ ಮಾಡಿದೆ.

ಡಿಸೆಂಬರ್ 13ರಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿತ್ತು. ಆದರೆ, ಕ್ರೀಡಾಂಗಣದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಪಂದ್ಯ ಆಯೋಜನೆ ಕಷ್ಟ ಎಂದು ಡಿಡಿಸಿಎ ಅಧಿಕೃತ ಪತ್ರದ ಮೂಲಕ ತಿಳಿಸಿದೆ. ಡಿಸೆಂಬರ್ ತಿಂಗಳ ದೆಹಲಿಯ ಹವಾಮಾನವೂ ಪಂದ್ಯಕ್ಕೆ ಪೂರಕವಾಗಿರುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ಪಂದ್ಯದ ಸ್ಥಳ ಬದಲಾವಣೆ ಕುರಿತು ಬಿಸಿಸಿಐ ನಿರ್ಧಾರಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಬೆಂಗಳೂರಿನಲ್ಲಿ, ಮೂರನೇ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಬಳಿಕ ರಾಜ್‌ಕೋಟ್, ಕಟಕ್ ಮತ್ತು ಪುಣೆಯಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಆಯೋಜಿಸಲಾಗಿದೆ.

Related Articles

Comments (0)