ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕ: ಸಿಎಂ ಡಿ.ಕೆ. ಶಿವಕುಮಾರ್
- by Suddi Loka
- November 21, 2026
- 10 Views
ಬೆಂಗಳೂರು: ರಾಜ್ಯದಲ್ಲಿ ನಡೆಯುವ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಸುಭದ್ರ ಮತ್ತು ಪಾರದರ್ಶಕ ವ್ಯವಸ್ಥೆಯಡಿ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ನಡೆದ ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆಯುವ ಅಂಕಗಳ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ಗಳಿಸಿರುವ ಅಂಕಗಳನ್ನೂ ಪರಿಗಣಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡಿಲ್ಲ ಎಂದು ಹೇಳಿದರು.

ನೀಟ್ ಪರೀಕ್ಷೆಯಲ್ಲಿ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ರಾಜ್ಯದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ದೊರೆಯಬೇಕು. ರಾಷ್ಟ್ರಮಟ್ಟದ ಪರೀಕ್ಷೆಗಳಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸುವುದು ಗ್ರಾಮೀಣ ವಿದ್ಯಾರ್ಥಿಗಳಿಗೆ ಕಷ್ಟಕರವಾಗಿರುವುದರಿಂದ ಅವರಿಗೆ ಕೃಪಾಂಕ ನೀಡಬೇಕು ಎಂದು ಪ್ರತಿಪಾದಿಸಿದರು.
ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.


Comments (0)