ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ವಿಧಾನಸಭೆ ಅಂಗೀಕಾರ;ನಿಶ್ಚಿತಾರ್ಥ ಮಾಡಿದ್ರೂ ಬೀಳುತ್ತೆ ಕೇಸ್
- by Suddi Team
- August 18, 2025
- 414 Views

ಬೆಂಗಳೂರು:ಬಾಲ್ಯವಿವಾಹವನ್ನು ಬೇರುಮಟ್ಟದಲ್ಲೇ ಕಿತ್ತುಹಾಕಬೇಕು ಎನ್ನುವ ಉದ್ದೇಶದಿಂದ ಬಾಲ್ಯ ವಿವಾಹ ತಿದ್ದುಪಡಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು,18 ವರ್ಷ ತುಂಬುವ ಮೊದಲೇ ವಿವಾಹವಲ್ಲ,ಇನ್ಮುಂದೆ ನಿಶ್ಚಿತಾರ್ಥ ಮಾಡಿದ್ರೂ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಿದೆ.
ವಿಧಾನ ಸಭೆ ಶಾಸನ ರಚನಾ ಕಾರ್ಯಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.ರಾಜ್ಯದಲ್ಲಿ ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು,ಕಠಿಣ ಕಾನೂನು ತಂದರೂ ತಡೆಗಟ್ಟಲು ಇದುವರೆಗೂ ಸಾಧ್ಯವಾಗಿಲ್ಲ ಹಾಗಾಗಿ ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಲ್ಯ ವಿವಾಹ ತಿದ್ದುಪಡಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ವಿವರಣೆ ನೀಡಿ ಸದನದ ಅಂಗೀಕಾರಕ್ಕೆ ಮನವಿ ಮಾಡಿದರು.
2024-25ನೇ ಸಾಲಿನಲ್ಲಿ 1828 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿದ್ದು,ಇದರಲ್ಲಿ 1260 ಪ್ರಕರಣಗಳನ್ನು ತಡೆಯಲಾಗಿದೆ, ಇಂಥ ಕಠಿಣ ಕಾನೂನಿನ ನಡುವೆಯೂ 369 ಬಾಲ್ಯವಿವಾಹ ಪ್ರಕರಣಗಳು ನಡೆದಿವೆ. ಬಾಲ್ಯವಿವಾಹ ನಡೆದ ಪ್ರಕರಣಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.ಆದರೆ ಹೊಸ ಕಾಯ್ದೆ ನಿಯಮದ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ, ಬಾಲ್ಯವಿವಾಹವನ್ನು ಬೇರುಮಟ್ಟದಲ್ಲೇ ಕಿತ್ತುಹಾಕಬೇಕು ಎಂಬುದೇ ನಮ್ಮ ಇಲಾಖೆಯ ಮೂಲ ಉದ್ದೇಶ ಎಂದು ವಿಧೇಯಕದ ಅಂಗೀಕಾರಕ್ಕೆ ಮನವಿ ಮಾಡಿದರು.
ನಂತರ ವಿಧಾನಸಭಾಧ್ಹಕ್ಷರು ವಿಧೇಯಕವನ್ನು ಮತಕ್ಕೆ ಹಾಕಿದರು. ಧ್ವನಿ ಮತದ ಮೂಲಕ ವಿಧೇಯಕವನ್ನು ವಿಧಾನಸಭೆ ಅಂಗೀಕರಿಸಿತು.
Related Articles
Thank you for your comment. It is awaiting moderation.
Comments (0)