ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಬಿಎಂಟಿಸಿ ಬಸ್ ಪಾಸ್ ಪಡೆಯಿರಿ
- by Suddi Team
- May 27, 2025
- 106 Views
ಬೆಂಗಳೂರು: ವಿದ್ಯಾರ್ಥಿಗಳಿಗಾಗಿ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸಲು ಉಚಿತ ಹಾಗು ರಿಯಾಯಿತಿ ಪಾಸ್ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಿಎಂಟಿಸಿ ಬಸ್‌ಗಳಲ್ಲಿ ಉಚಿತ / ರಿಯಾಯಿತಿ ದರದಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳು ಪಾಸ್‌ಗಾಗಿ ಮೇ 26ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದವರಿಗೆ ಜೂನ್ 1ರಿಂದ ವಿದ್ಯಾರ್ಥಿ ಪಾಸ್‌ಗಳನ್ನು ವಿತರಣೆ ಮಾಡಲಾಗುವುದು. ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ನಮೂನೆ ಲಭ್ಯವಿದೆ. ಬೆಂಗಳೂರು ಒನ್ ಕೇಂದ್ರಗಳ ಮೂಲಕವು ಅರ್ಜಿ ಸಲ್ಲಿಸಲು ಅವಕಾಶವಿದೆ.
ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಇದೆ. ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080–22483777 ಸಂಪರ್ಕಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
Related Articles
Thank you for your comment. It is awaiting moderation.


Comments (0)