ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಮೋದಿ ಸಂತಾಪ
- by Suddi Team
- June 5, 2025
- 10 Views

ನವದೆಹಲಿ: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದಿಂದ ಬೆಂಗಳೂರಿನಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿಯವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿಯವರ ಕಚೇರಿಯು X ನಲ್ಲಿ ಪೋಸ್ಟ್ ನಲ್ಲಿ;“ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Related Articles
Thank you for your comment. It is awaiting moderation.
Comments (0)