ಫೆ.27 : ಅಮ್ಮಿನಬಾವಿಯಲ್ಲಿ ಚಿಣ್ಣರ ಸಾಂಸ್ಕೃತಿಕ ಹಬ್ಬ
- by Suddi Team
- February 24, 2026
- 41 Views
ಧಾರವಾಡ : ಹತ್ತಿರದ ತಾಲೂಕಿನ ಅಮ್ಮಿನಬಾವಿ ಗ್ರಾಮದ ಶ್ರೀಮತಿ ಸುಶಿಲಾತಾಯಿ ಅಜ್ಜಯ್ಯ ಹಿರೇಮಠ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.27ರಂದು(ಶುಕ್ರವಾರ) ಸಂಜೆ 4 ಗಂಟೆಗೆ ಚಿಣ್ಣರ ಸಾಂಸ್ಕೃತಿಕ ಹಬ್ಬ ಜರುಗಲಿದೆ.
ಬಾಳೆಹೊನ್ನೂರಿನ ಶ್ರೀಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನ ಹಾಗೂ ಅಮ್ಮಿನಬಾವಿಯ ಶ್ರೀಗುರುಶಾಂತಲಿಂಗ ಶಿವಾಚಾರ್ಯ ಶಿಕ್ಷಣ ಪ್ರತಿಷ್ಠಾನಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಈ ಹಬ್ಬವನ್ನು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು. ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ಶಾಲಾ ಆಡಳಿತ ಮಂಡಳಿಯ ಸದಸ್ಯರುಗಳಾದ ಎಂ.ಸಿ.ಹುಲ್ಲೂರ, ವ್ಹಿ. ಬಿ. ಕೆಂಚನಗೌಡರ, ಶಿವಾನಂದ ಹಿರೇಮಠ, ಬಸವರಾಜ ಕೊಳ್ಳಿ, ಅಮೃತ ಗುಡಿ, ಗುರುಮೂರ್ತಿ ಯರಗಂಬಳಿಮಠ, ಚಂದ್ರು ಶೆಟ್ಟರ, ವಿಜಯಕುಮಾರ ಇಟಗಿ, ಸೋಮಲಿಂಗಶಾಸ್ತ್ರಿ ಗುಡ್ಡದಮಠ ಅತಿಥಿಗಳಾಗಿ ಪಾಲ್ಗೊಳ್ಳುವರು.
ಈ ಸಾಂಸ್ಕೃತಿಕ ಹಬ್ಬದಲ್ಲಿ ಶಾಲಾ ಮಕ್ಕಳು ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಅಭಿವ್ಯಕ್ತಿಸಲಿದ್ದು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮುಖ್ಯಾಧ್ಯಾಪಕಿ ಮಂಜುಳಾ ದೊಡಮನಿ ಹಾಗೂ ಹಬ್ಬದ ಸಂಚಾಲಕ ಟಿ.ಎಂ. ದೇಸಾಯಿ ಜಂಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Articles
Thank you for your comment. It is awaiting moderation.


Comments (0)