ಕಾವೇರಿ ಆರತಿ ಪ್ರಯೋಜನದ ಬಗ್ಗೆ ರೈತ ಸಂಘದವರಿಗೆ ಮಾಹಿತಿ ಇಲ್ಲ:ಡಿಕೆ ಶಿವಕುಮಾರ್
- by Suddi Team
- June 19, 2025
- 118 Views
ಬೆಂಗಳೂರು:ಕಾವೇರಿ ಆರತಿ ಪ್ರಯೋಜನದ ಬಗ್ಗೆ ರೈತ ಸಂಘದವರಿಗೆ ಮಾಹಿತಿ ಇಲ್ಲ ಹಾಗಾಗಿ ವಿರೋಧ ಮಾಡುತ್ತಿದ್ದಾರೆ,ಕಾವೇರಿ ತುಂಬಿ ಹರಿಯದಿದ್ದರೆ ಅನೇಕ ಸಮಸ್ಯೆ ಅನುಭವಿಸಬೇಕಾಗುತ್ತದೆ,ಉತ್ತಮ ಮಳೆಗಾಗಿ ಪ್ರಾರ್ಥನೆ ಮಾಡುವುದರಲ್ಲಿ ತೊಂದರೆ ಏನು? ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,“ಕಾವೇರಿ ಆರತಿಯನ್ನು ನಾವು ಪ್ರಾರಂಭ ಮಾಡಿದ್ದೇವೆ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ನಂಬಿದ್ದೇನೆ. ಈಗ ಕೆಆರ್ ಎಸ್ ಬಳಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ಬಿಡಬ್ಲ್ಯೂ ಎಸ್ಎಸ್ ಬಿ ಅಧ್ಯಕ್ಷರ ನೇತೃತ್ವದಲ್ಲೇ ಇದಕ್ಕೆ ಸಮಿತಿ ರಚಿಸಲಾಗಿದೆ. ಅವರು ಉತ್ತಮ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಇದರಿಂದ ಆ ಭಾಗದಲ್ಲಿ ಒಂದೂವರೆ ಸಾವಿರ ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಈ ವಿಚಾರವಾಗಿ ಮಂಡ್ಯ ಜಿಲ್ಲೆಯ ರೈತ ಸಂಘದವರಿಗೆ ಸರಿಯಾದ ಮಾಹಿತಿ ಇಲ್ಲ” ಎಂದರು.
“ಕಾವೇರಿ ಆರತಿ ಬಗ್ಗೆ ಇರುವ ಅನುಮಾನಗಳನ್ನು ಬಗೆಹರಿಸಲು ಜಿಲ್ಲಾ ಮಂತ್ರಿಗಳ ಜತೆ ಸಭೆ ಮಾಡಲಿದ್ದೇನೆ. ನಾವು ಕಾವೇರಿಯನ್ನು ತಾಯಿ ಎಂದು ಕರೆಯುತ್ತೇವೆ. ನೀರಿಗೆ ಜಾತಿ, ಭಾಷೆ, ಧರ್ಮ ಇಲ್ಲ. ನೀರು ಎಲ್ಲರಿಗೂ ಬೇಕು. ಕುಡಿಯಲು, ವ್ಯವಸಾಯಕ್ಕೆ, ಕೈಗಾರಿಕೆ ಎಲ್ಲದಕ್ಕೂ ನೀರು ಅಗತ್ಯ. ಈ ನೀರಿಗಾಗಿ ಉತ್ತಮ ಮಳೆಗಾಗಿ ಪ್ರಾರ್ಥನೆ ಮಾಡುವುದರಲ್ಲಿ ತೊಂದರೆ ಏನು? ಕಾವೇರಿ ತುಂಬಿ ಹರಿಯದಿದ್ದರೆ ಅನೇಕ ಸಮಸ್ಯೆ ಅನುಭವಿಸಬೇಕಾಗುತ್ತದೆ” ಎಂದರು.
Related Articles
Thank you for your comment. It is awaiting moderation.


Comments (0)