ಕಾಡುಗೊಲ್ಲ, ಅಲೆಮಾರಿ- ಅರೆ ಅಲೆಮಾರಿ ಒಳಪಂಗಡಗಳಿಗೆ ಗುಡ್ ನ್ಯೂಸ್;ಕುಲಶಾಸ್ತ್ರೀಯ ಅಧ್ಯಯನಕ್ಕೆ ಸರ್ಕಾರದ ನಿರ್ಧಾರ
- by Suddi Team
- August 17, 2025
- 169 Views
ಬೆಂಗಳೂರು:ಕಾಡುಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಒಳಪಂಗಡಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಿದೆ.ಆದಷ್ಟು ಬೇಗ ಕುಲಶಾಸ್ತ್ರೀಯ ಅಧ್ಯಯನಕ್ಕೆ ಆದೇಶ ಹೊರಡಿಸುವ ಭರವಸೆ ನೀಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ,ಕಾಡುಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಶೀಘ್ರವೇ ಆದೇಶ ಹೊರಡಿಸುವ ಭರವಸೆ ನೀಡಿದರು.
ಚಿತ್ರದುರ್ಗ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಈ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನದ ಬಗ್ಗೆ ಹಲವು ಬಾರಿ ಚರ್ಚೆ ನಡೆದಿತ್ತು.ಆದರೆ ಯಾವುದೇ ಕ್ರಮ ಆಗಿರಲಿಲ್ಲ. ಆದರೆ ಕಾಡುಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದಲ್ಲಿ 46 ಒಳಪಂಗಡಗಳಿವೆ. ಹೀಗಾಗಿ ಇದರ ಕುಲಶಾಸ್ತ್ರೀಯ ಅಧ್ಯಯನ ಅಗತ್ಯವಿದೆ ಎಂದು ಸಮುದಾಯದ ಮುಖಂಡರು ಹಲವು ಬಾರಿ ಮನವಿ ಮಾಡಿದ್ದರು ಹಾಗಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ, ಕುಲಶಾಸ್ತ್ರೀಯ ಅಧ್ಯಯನದಿಂದ ಅನುಕೂಲವಾಗಲಿದೆ ಎಂದರು.
ಕಾಡುಗೊಲ್ಲ ಸಮುದಾಯ ಭವನ ನಿರ್ಮಾಣಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅನುದಾನ ಒದಗಿಸಲಾಗುವುದು. ಪ್ರತಿಯೊಂದು ಸಣ್ಣ ಸಮಾಜದ ಬೆಳವಣಿಗೆ ಆಗಬೇಕು. ಈ ನಿಟ್ಟಿನಲ್ಲಿ ನಮ್ಮ ಮುಖ್ಯಮಂತ್ರಿಗಳು ಅಗತ್ಯ ಕ್ರಮವಹಿಸಿದ್ದಾರೆ. ಅದಕ್ಕೆ ಉದಾಹರಣೆ ಎಂದರೆ ಇತಿಹಾಸದಲ್ಲೇ ಮೊದಲ ಬಾರಿಗೆ ಹಿಂದುಳಿದ ವರ್ಗಗಳ ನಿಗಮಗಳಿಗೆ ಒಟ್ಟು ರೂ.1500 ಕೋಟಿ ಅನುದಾನ ಒದಗಿರುವುದೇ ಸಾಕ್ಷಿ ಎಂದರು.
ಪ್ರತಿಯೊಂದು ಸಮಾಜದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಿರುತ್ತವೆ. ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಸಂಘಟನೆ ಸಾಧ್ಯ. ಅಂಬೇಡ್ಕರ್ ಅವರು ಹೇಳಿದ್ದಂತೆ ಯಾವುದೇ ಸಮುದಾಯ ಅಭಿವೃದ್ಧಿ ಆಗಬೇಕಾದರೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಂದು ಸಣ್ಣ ಸಮುದಾಯಗಳು ಹೆಜ್ಜೆಯನ್ನಿಡಬೇಕು ಎಂದು ಸಲಹೆ ನೀಡಿದರು.
Related Articles
Thank you for your comment. It is awaiting moderation.


Comments (0)