ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಇಲ್ಲಿಯವರಿಗೆ ಕೇವಲ ಆಡಳಿತ ಕಾರ್ಯಗಳಿಗಷ್ಟೇ ಸೀಮಿತವಾಗಿದ್ದ ವಿಧಾನಸೌಧವು ಇನ್ನು ಮುಂದೆ ಪ್ರವಾಸಿ, ಪ್ರೇಕ್ಷಣೀಯ ಸ್ಥಳದ ಸಾಲಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಜನಸಾಮಾನ್ಯರಿಗೂ ನಾಡಿನ ಶಕ್ತಿಸೌಧ ವೀಕ್ಷಣೆ ಅವಕಾಶ ಸಿಗಲೆಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ಭಾನುವಾರ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ,ಕರ್ನಾಟಕ ಸರ್ಕಾರ ಜೂ.1ರಿಂದ ವಿಧಾನಸೌಧ ಗೈಡೆಡ್ ಟೂರ್ ಆರಂಭವಾಗಿದ್ದು, ಮೊದಲ ದಿನ 67 ಮಂದಿ ಪುರುಷರು ಮತ್ತು 53 ಮಂದಿ ಮಹಿಳೆಯರು ಸೇರಿ ಒಟ್ಟು 120 ಮಂದಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಸಿದ್ದುಅದರಲ್ಲಿ 102 ಮಂದಿ ಹಾಜರಾಗಿ ವಿಧಾನಸೌಧ ವೀಕ್ಷಿಸಿದ್ದಾರೆ ಎಂದು ಕೆಎಸ್‌ಟಿಡಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

 

ಇನ್ಮುಂದೆ ವಿಧಾನಸೌಧ ನೋಡೋಕು ಹಣ ಕೊಡ್ಬೇಕು

Related Articles

Comments (0)

Leave a Comment