ಇನ್ಮುಂದೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಬೇಕಿಲ್ಲ
- by Suddi Team
- October 8, 2025
- 23 Views

ಬೆಂಗಳೂರು:ಇನ್ಮುಂದೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಪರಿಪಾಠ ಇರಲ್ಲ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಕ್ಷಣದಿಂದ ರದ್ದುಪಡಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಅವರ ಹೆಸರನ್ನು ಆಯ್ಕೆ ಸಮಿತಿಯ ಪರಿಶೀಲನೆಗೆ ಪರಿಗಣಿಸುವ ನಿರ್ಧಾರ ಕೈಗೊಂಡಿದೆ.
ರಾಜ್ಯದ ಪ್ರತಿಷ್ಠಿತ ಪ್ರಶಸ್ತಿ ನೀಡಿ ಎಂದು ಅರ್ಜಿ ಸಲ್ಲಿಸಲು ಗಣ್ಯರು ಮುಜುಗರಕ್ಕೊಳಗಾಗುವುದನ್ನು ತಪ್ಪಿಸಲು ಮತ್ತು ಅರ್ಹರು ಅರ್ಜಿ ಸಲ್ಲಿಸದೇ ಪ್ರಶಸ್ತಿ ಪಟ್ಟಿಯಿಂದ ಹೊರಗುಳಿಯುವುದನ್ನು ತಪ್ಪಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿವ ಪದ್ದತಿಗೆ ತೆರೆ ಎಳೆದು ಸಮಿತಿ ಮೂಲಕ ನೇರವಾಗಿ ಅರ್ಹರ ಆಯ್ಕೆಗೆ ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಹೇಳಿದ್ದಾರೆ.
ಪ್ರಶಸ್ತಿಗೆ ಅರ್ಹವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿದೆ. ಈ ವರ್ಷ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು.ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
Related Articles
Thank you for your comment. It is awaiting moderation.
Comments (0)