ಹೈಕಮಾಂಡ್ ಬುಲಾವ್ ನೀಡಿಲ್ಲ; ಡಿಸಿಎಂ ಸ್ಪಷ್ಟ‌ನೆ

ಶಿರಡಿ: ಹೈಕಮಾಂಡ್ ನನಗೆ ಬುಲಾವ್ ನೀಡಿಲ್ಲ, ನಾನು ದೆಹಲಿಗೂ ಹೋಗಿಲ್ಲ, ಖಾಸಗಿ ಕಾರ್ಯಕ್ರಮದ ನಿಮಿತ್ತ ಬೇರೆ ಕಡೆ ತೆರಳಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಪ್ರವಾಸದ ಕುರಿತು ಮಾಧ್ಯಮಗಳ ವರದಿ ಬೆನ್ನಲ್ಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಡಿ.ಕೆ. ಶಿವಕುಮಾರ್, ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ ಕಡೆ ಭೇಟಿ ನೀಡಿದ್ದೇನೆ. ಆದರೆ, ಕೆಲವು ಟಿವಿ ಚಾನೆಲ್ ಮತ್ತಿತರ ಮಾಧ್ಯಮಗಳಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಗೆ ತೆರಳಿದ್ದೇನೆ ಎಂದು ವರದಿ ಆಗಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ವಿಚಾರ. ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದು ಸಲ್ಲದು ಎಂದು ತಿಳಿಸಿದ್ದಾರೆ.

ಸಾಯಿಬಾಬಾ ದರ್ಶನ:

ಪವಿತ್ರ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಬಾಬಾ ಅವರ ದಿವ್ಯ ದರ್ಶನ ಪಡೆದದ್ದು ನಿಜಕ್ಕೂ ಧನ್ಯವೆನಿಸುತ್ತದೆ. ಶ್ರದ್ಧೆ (ನಂಬಿಕೆ) ಮತ್ತು ಸಬುರಿ (ತಾಳ್ಮೆ) ಇದ್ದರೆ ಎಲ್ಲವೂ ಸಾಧ್ಯ. ಪ್ರಯತ್ನ ವಿಫಲವಾದರೂ, ಪ್ರಾರ್ಥನೆ ವಿಫಲವಾಗುವುದಿಲ್ಲ! ಓಂ ಸಾಯಿ ರಾಮ್ ಎಂದು ಡಿಸಿಎಂ ಬರೆದುಕೊಂಡಿದ್ದಾರೆ.

Related Articles

Comments (0)

Leave a Comment